Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ, ದಾವಣಗೆರೆಯಲ್ಲಿ ಗೆಲುವು ನಮ್ಮದೇ: ಸಚಿವ ಸತೀಶ್‌ ಜಾರಕಿಹೊಳಿ




ಬೆಳಗಾವಿ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಉಮೇಶ ಮೇಟಿ ಅವರಿಗೆ ಟಿಕೆಟ್‌ ದೊರಕಬೇಕೆಂದು ಜನರ, ನಮ್ಮ ನಿರೀಕ್ಷೆ ಇತ್ತು. ಅದರಂತೆಯೇ ಹೈಕಮಾಂಡ್‌ ಅವರು ಉಮೇಶ ಮೇಟಿಗೆ ಟಿಕೆಟ್‌ ನೀಡಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮೇಟಿ ಕುಟುಂಬಸ್ಥರ ಮೇಲೆ ಅಲ್ಲಿನ ಜನ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಬಾಗಲಕೋಟೆಯಲ್ಲಿ ಕಳೆದ ಎರಡು ತಿಂಗಳಿಂದ ನಾವು ಚುನಾವಣೆ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ಉಮೇಶ ಮೇಟಿ ಗೆಲುವಿಗೆ ಕಷ್ಟವಿಲ್ಲ ಎಂದು ತಿಳಿಸಿದರು.


ಉಮೇಶ ಮೇಟಿ ಅವರ ಪರ ಪ್ರಚಾರ ಮಾಡುತ್ತೇನೆ. ದಾವಣಗೆರೆಗೂ ಪ್ರಚಾರಕ್ಕೆ ಹೋಗುತ್ತೇನೆ. ಆದರೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರಕ್ಕೆ ಆದ್ಯತೆ ನೀಡುತ್ತೇನೆ. ಎರಡು ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.


ಕುಟುಂಬ ರಾಜಕಾರಣ ನಮ್ಮ ಪಕ್ಷದಲ್ಲಿ ಅಷ್ಟೇ ಇಲ್ಲಾ, ಎಲ್ಲಾ ಪಕ್ಷದಲ್ಲೂ ಇದೆ. ಪಕ್ಷದ ರಾಜ್ಯದಲ್ಲೂ ಇದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಟಕೆಟ್‌ ನೀಡಬೇಕಾಗುತ್ತದೆ ಎಂದರು.

ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೆಳಗಾವಿ ನಗರದ ಕಸ ವಿಲೇವಾರಿ ಸಮಸ್ಯೆ ಕಳೆದ ಇಪ್ಪತ್ತು ವರ್ಷದಿಂದ ಇದೆ. ಶಾಶ್ವತವಾಗಿ ಸಮಸ್ಯೆ ಬಗೆಹರಿಸಲು ನಗರದ ನಾಲ್ಕೂ ದಿಕ್ಕುಗಳಲ್ಲಿ

ನಾಲ್ಕು ಹೊಸ ಘನತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ನಾನು ಅನೇಕ ಬಾರಿ ಸೂಚಿಸಿದ್ದೇನೆ. ಆದರೆ ಇದಕ್ಕೆ ಶಾಸಕ ಅಭಯ ಪಾಟೀಲ್‌ ಅವರು ಆಸಕ್ತಿ ವಹಿಸುತ್ತಿಲ್ಲ. ವರ್ಷಕ್ಕೊಬ್ಬರು ಮಾಹಾನಗರ ಪಾಲಿಕೆ ಆಯುಕ್ತರು ಬದಲಾಗುತ್ತಾರೆ. ಮೇಯರ್‌, ಉಪಮೇಯರ್‌ ಮಾಡುವುದೇ ಅವರ ದೊಡ್ಡ ಸಾಧನೆಯಾಗಿದೆ ಎಂದು ಶಾಸಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.


ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರದ ಅರಣ್ಯ, ಪರಿಸರಿ ಇಲಾಖೆಯ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ದೊರೆತ್ತಿಲ್ಲ, ಆದ್ದರಿಂದ ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದು ನನ್ನ ನೇತೃತ್ವದಲ್ಲಿಯೇ ಸರ್ವಪಕ್ಷದ ನಿಯೋಗ ಕೊಂಡ್ಯೊಯ್ಯುತ್ತೇನೆ ಎಂದು ಸಚಿವರು, ಹಿಪ್ಪರಗಿ ಬ್ಯಾರೇಜ್ ನ ಗೇಟ್ ಸಂಖ್ಯೆ 22 ಮುರಿದುಬಿದ್ದ ಪರಿಣಾಮ, ಸುಮಾರು 2.5 ರಿಂದ 3.5 ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗಿದ್ದು, ಈ ಗಂಭೀರ ಜಲಸಂಕಷ್ಟ ಪರಿಹರಿಸಲು ಮಹಾರಾಷ್ಟ್ರ ಸರ್ಕಾರದಿಂದ ಹೆಚ್ಚುವರಿ ನೀರನ್ನು ಬಿಡುಗಡೆಗೊಳಿಸುವಂತೆ ಕೋರಲು ಕರ್ನಾಟಕದ ಜನಪ್ರತಿನಿಧಿಗಳ ನಿಯೋಗವು ಮಹಾರಾಷ್ಟ್ರಕ್ಕೆ ಭೇಟಿ ನೀಡಲು ನಿರ್ಧರಿಸಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.


ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಟ್ಟಿ ಸೇರಿದಂತೆ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ