LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ

ಬೆಂಗಳೂರು, ಏಪ್ರಿಲ್ 23: ಕಾಶ್ಮೀರದ ಪಹಲ್​ಗಾಮ್​​ನಲ್ಲಿ  ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ ಅನೇಕ ಪ್ರವಾಸಿಗರು ಸದ್ಯ ಅಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರಲು ಕರ್ನಾಟಕ ಸರ್ಕಾರ 2 ತಂಡಗಳನ್ನು ಕಳುಹಿಸಿದೆ. ಸಚಿವ ಅನಿಲ್ ಲಾಡ್ ಅವರ ನೇತೃತ್ವದಲ್ಲಿ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ  ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.

ಕನ್ನಡಿಗರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.

ಕಾಶ್ಮೀರ ಉಗ್ರ ದಾಳಿ: ಕರ್ನಾಟಕ ಸಹಾಯವಾಣಿ ಸಂಖ್ಯೆಗಳು



  • 080-43344334

  • 080-43344335

  • 080-43344336

  • 080-43344342


ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸದ ವೇಳೆ ಜಮ್ಮು ಪ್ರವಾಸದಲ್ಲಿ ಇದ್ದ ಹಾವೇರಿ ಜಿಲ್ಲೆಯ ಎರಡು ಕುಟುಂಬಗಳು ಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. ಹಾವೇರಿಯ ವಿರೇಶ್ ದಂಪತಿ ಹಾಗೂ ಶಿಗ್ಗಾವಿಯ ನಾಗರಾಜ್ ದಂಪತಿ ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿದ್ದಾರೆ. ಸದ್ಯ ಇವರು ಸದ್ಯ ಜಮ್ಮುವಿನ ಕತ್ರಾದಲ್ಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್