Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ
ಬಳ್ಳಾರಿ:03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವಾಸವಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ವರ್ಷದ ಸ್ಪರ್ಧೆಯ ವಿಷಯ "ನಮ್ಮ ಭವಿಷ್ಯಕ್ಕಾಗಿ ಪ್ರಕೃತಿಯಿಂದ ಪ್ರೇರಣೆ" ಆಗಿದ್ದು, ವಿದ್ಯಾರ್ಥಿಗಳು ಪ್ರಕೃತಿಯೊಂದಿಗೆ ಹೊಂದಾಣಿಕೆಯ ಜೀವನ, ಪರಿಸರ ಸಂರಕ್ಷಣೆ ಹಾಗೂ  ಅಭಿವೃದ್ಧಿಯ ಕುರಿತು ತಮ್ಮ ಆಲೋಚನೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಪಡಿಸಿದರು.
ಸ್ಪರ್ಧೆಯಲ್ಲಿ ಶಾಲೆಯ 5 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಪ್ರಕೃತಿಯ ಸೌಂದರ್ಯ, ಮರಗಳ ಮಹತ್ವ, ಜಲ ಸಂರಕ್ಷಣೆ, ವಾಯು ಮಾಲಿನ್ಯ ನಿಯಂತ್ರಣ, ಹಸಿರು ಭೂಮಿ, ಜೀವ ವೈವಿಧ್ಯತೆ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಕುರಿತಾದ ಆಕರ್ಷಕ ಚಿತ್ರಗಳನ್ನು ರಚಿಸಿದರು. ವಿದ್ಯಾರ್ಥಿಗಳ ಚಿತ್ರಗಳಲ್ಲಿ ಪರಿಸರದ ಬಗ್ಗೆ ಇರುವ ಕಾಳಜಿ ಮತ್ತು ಜಾಗೃತಿ ಸ್ಪಷ್ಟವಾಗಿ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮಾತನಾಡಿ, “Inspired by Nature: For Climate – For Our  Future ಎಂಬ ವಿಷಯವು ಪ್ರಕೃತಿಯೇ ನಮ್ಮ ಭವಿಷ್ಯದ ಮಾರ್ಗದರ್ಶಕ ಎಂಬ ಸಂದೇಶವನ್ನು ನೀಡುತ್ತದೆ. ಪ್ರಕೃತಿಯನ್ನು ಪ್ರೀತಿಸುವುದು ಮತ್ತು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಮಹತ್ವವನ್ನು ಅರಿತು ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.
ಸ್ಪರ್ಧೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವುದು, ಪ್ರಕೃತಿಯ ಬಗ್ಗೆ ಗೌರವ ಬೆಳೆಸುವುದು ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಸೃಜನಾತ್ಮಕವಾಗಿ ಅಭಿವ್ಯಕ್ತಪಡಿಸಲು ಅವಕಾಶ ಕಲ್ಪಿಸುವುದಾಗಿತ್ತು. ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಮತ್ತು ಪರಿಸರ ಕಾಳಜಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ , ಸ್ಪರ್ಧೆಯಲ್ಲಿ ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿ ಬಹುಮಾನಕ್ಕಾಗಿ ಶಿಫಾರಸ್ಸು ಮಾಡಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
One attachment  •  Scanned by Gmail
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ