LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ವೈಮಾನಿಕ ದಾಳಿಯಲ್ಲಿ ಪಾಲೆಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ ನಾಯಕ ಸಾವು

ಇಸ್ರೇಲ್​18: ಪಾಲೆಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ ನಾಯಕನನ್ನು ವೈಮಾನಿಕ ದಾಳಿಯಲ್ಲಿ ಕೊಲ್ಲಲಾಗಿದೆ ಎಂದು ಇಸ್ರೇಲ್​ ರಕ್ಷಣಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.


ಪಾಲೇಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ನ ಜೆನಿನ್ ಬ್ರಿಗೇಡ್‌ನ ಕಮಾಂಡರ್ ಅಸ್ಲಾಂ ಹಮೈಸಾ ಎಂದು ಪತ್ತೆ ಮಾಡಲಾಗಿದೆ. ಶಿನ್ ಬೆಟ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಅವರು ಇಸ್ಲಾಮಿಕ್ ಜಿಹಾದ್ ನಾಯಕ, ಕಟ್ಟಡದಲ್ಲಿ ಅವಿತು ಕುಳಿತಿದ್ದಾಗ ಆತನ ಮೇಲೆ ದಾಳಿ ನಡೆಸಲಾಗಿದೆ ಎಂದು ಐಡಿಎಫ್​ ತಿಳಿಸಿದೆ.


ವೆಸ್ಟ್ ಬ್ಯಾಂಕ್‌ನ ಹರ್ಮೆಶ್ ವಸಾಹತು ಪ್ರದೇಶದಲ್ಲಿ ಯಹೂದಿಗಳ ಹತ್ಯೆಯ ದಾಳಿಯ ಪ್ರಮುಖ ಕಾರಣ ಪಾಲೆಸ್ತೇನಿಯನ್ ಇಸ್ಲಾಮಿಕ್ ಜಿಹಾದ್ ನಾಯಕನಾಗಿದ್ದ ಎಂದು ಐಡಿಎಫ್​ ಮಾಹಿತಿ ನೀಡಿದೆ.


ಅಸ್ಲಾಂ ಹಮೈಸಾ ಹತ್ಯೆಯನ್ನು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಶುಕ್ರವಾರ ರಾತ್ರಿ ಜೆನಿನ್‌ನಲ್ಲಿರುವ ಕಟ್ಟಡವೊಂದರ ಮೇಲೆ ಇಸ್ರೇಲ್ ವಾಯುಪಡೆ ನಡೆಸಿದ ದಾಳಿಯಲ್ಲಿ ಅಸ್ಲಾಂ ಹಮೈಸಾ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.


ಈ ಕುರಿತು ಇಸ್ರೇಲ್​ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮಾತನಾಡಿ, ನಮ್ಮ ದೇಶವು ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬೊಲ್ಲಾ ಜೊತೆ ಕಠಿಣ ಯುದ್ಧವನ್ನು ನಡೆಸದಂತೆ ಇರಲು ಆದ್ಯತೆ ನೀಡಿರುವುದಾಗಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್