Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್‌ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ 

ಬೆಳಗಾವಿ: ದೇಶದಲ್ಲಿ ಪಂಚಾಯತ್‌ ರಾಜ್‌ ವ್ಯವಸ್ಥೆಯು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. 
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಅಧಿಕಾರ ವಿಕೇಂದ್ರೀಕರಣದಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು. 
ಪಂಚಾಯತ್‌ ರಾಜ್‌ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದು ನಮ್ಮ ಕಾಂಗ್ರೆಸ್‌ ಪಕ್ಷ. ಮಹಾತ್ಮ ಗಾಂಧಿ ಕಂಡ ಕನಸುಗಳಲ್ಲಿ ಒಂದು ಗ್ರಾಮಸ್ವರಾಜ್‌, ಇನ್ನೊಂದು ಮಹಿಳಾ ಅಭಿವೃದ್ಧಿ. ಮಹಿಳೆಯರಿಗೆ ಹೆಚ್ಚು ಹತ್ತಿರವಾಗಿರುವ ಮತ್ತೊಂದು ಇಲಾಖೆ ಎಂದರೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಎಂದರು. 
ಗ್ರಾಮದ ಸಮಸ್ಯೆಗಳಿಗೆ ಗ್ರಾಮದಲ್ಲೇ ಪರಿಹಾರ ಕಂಡುಕೊಳ್ಳುವುದು, ಜನರು ತಮ್ಮ ಅಭಿವೃದ್ಧಿಯಲ್ಲಿ ತಾವೇ ಭಾಗಿಯಾಗುವುದು, ಇದೇ ಪಂಚಾಯತ್ ರಾಜ್ ವ್ಯವಸ್ಥೆಯ ಉದ್ದೇಶ ಎಂದು ಹೇಳಿದರು. 
ಅಭಿವೃದ್ಧಿ ವಿಷಯದಲ್ಲಿ ಜನಪ್ರತಿನಿಧಿಗಳ ಜೊತೆ ಕೈಜೋಡಿಸುವುದೇ ಮೊದಲಿಗೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ). ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ 50ಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ ಪಿಡಿಒಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ತರುವ ಅನುದಾನವನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಇವತ್ತು ಯಾವುದೇ ಕ್ಷೇತ್ರಗಳು ಸುಧಾರಣೆ ಆಗಬೇಕಾದರೆ, ಪಂಚಾಯತ್‌ ಇಲಾಖೆಯ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ಬೆಂಗಳೂರು, ದೆಹಲಿಯಲ್ಲಿ ಕುಳಿತು ರೂಪಿಸುವ ಯೋಜನೆಗಳನ್ನು ಗ್ರಾಮಮಟ್ಟಕ್ಕೆ ತಲುಪಿಸಲು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ, ಸಿಬ್ಬಂದಿ ವರ್ಗದವರ ಪಾತ್ರ ದೊಡ್ಡದು ಎಂದು ಸಚಿವರು ಶ್ಲಾಘಿಸಿದರು. 
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಮಹಾಂತೇಶ್ ಕೌಜಲಗಿ, ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ, ಗಣೇಶ್ ಹುಕ್ಕೇರಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಜಲ್ ಸಾಹಿತ್ಯ ಭಾರತೀಯರ ಹೃದಯವನ್ನು ಗೆದ್ದಿದೆಮಕ್ಕಳ ಜೀವನ ಮೌಲ್ಯ ಹೆಚ್ಚಿಸಲು ಬೇಸಿಗೆ ಶಿಬಿರಗಳು ಸಹಕಾರಿವಿಶ್ವವಿದ್ಯಾಲಯಗಳು ಪ್ರಯೋಗ ಮತ್ತು ಹೊಸತನಕ್ಕೆ ಪ್ರೋತ್ಸಾಹಿಸಲಿ - ರಾಜ್ಯಪಾಲ ಥಾವರಚಂದ ಗೆಹ್ಲೊಟ್‌"ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ ೪.೩೦ ಕೋಟಿ ರೂ ಲಾಭ""ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರ"ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್‌ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ* *ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ**ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ* *ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ*ಪ್ರವೀಣ ಕುದರಿಮೋತಿ ʼಮಿಸ್ಟರ್‌ ಲಿಂಗರಾಜʼಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ: ಅರ್ಜಿ ಆಹ್ವಾನ