Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿ ಒಳಮೀಸಲಾತಿ ವಿರೋಧಿಸಿ ಹೋರಾಟ: ಪಾಂಡುರಂಗ ಪಮ್ಮಾರ

ಹುಬ್ಬಳ್ಳಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ ಹಾಗೂ ದೇಶದಾದ್ಯಂತ ಹೋರಾಟಕ್ಕೆ ರಾಜ್ಯ ಕೊರಮ, ಕೊರಚ, ಗೋವಿ, ಬಂಜಾರ ಮೀಸಲಾತಿ ಸಂರಕ್ಷಣಾ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಮುಖಂಡ ಪಾಂಡುರಂಗ ಪಮ್ಮಾರ ಹೇಳಿದರು‌.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳನ್ನು ವಿಂಗಡಿಸಿ ಅದರಲ್ಲಿ ಒಳಮೀಸಲಾತಿ ಮಾಡಲು ಇತ್ತಿಚೆಗೆ ಸುಪ್ರೀಮ್ ಕೋರ್ಟ್ ನೀಡಿದ ತೀರ್ಪಿಗೆ ನಮ್ಮ ವಿರೋಧವಿದ್ದು, ಅದಕ್ಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ ಜೊತೆಗೆ ದೇಶದಾದ್ಯಂತ ಈ ಮೀಸಲಾತಿ ವಿರೋಧಿಸಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದರು.

ಈಗಾಗಲೇ ಮಾಯಾವತಿ, ಪಾಸ್ವಾನ್ ಸೇರಿದಂತೆ ಹಲವು ಮುಖಂಡರು ಇದರ ವಿರುದ್ದ ಧ್ವನಿ ಎತ್ತಿದ್ದು, ಈ ಕುರಿತು ಪತ್ರ ಚಳುವಳಿ, ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. 2023 ರಲ್ಲಿ ಎ.ಜೆ.ಸದಾಶಿವ ಆಯೋಗದ ಅವೈಜ್ಞಾನಿಕ ಅಸಂವಿಧಾನಿಕ ವರದಿಯನ್ನು ಸರ್ಕಾರ ರದ್ದುಪಡಿಸಿದ್ದು, ಇದೀಗ ಸುಪ್ರೀಂಕೋರ್ಟ್ ಒಳಮೀಸಲಾತಿಗೆ ಅಸ್ತು ಎಂದಿರುವುದು ಖಂಡನೀಯ. ಇದೆಲ್ಲದರ ವಿರುದ್ದ 9 ಜನ ನ್ಯಾಯಾಧೀಶರ ಮುಂದೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದರು.

ಈಗಾಗಲೇ ಆಂದ್ರ ಸರ್ಕಾರ ಒಳಮೀಸಲಾತಿ ಮಾಡಲು ಎಡವಿದ್ದು, ಮದ್ರಾಸ್ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸ್ಪಷ್ಟವಾಗಿ ಒಳಮೀಸಲಾತಿ ಮಾಡಲು ಅವಕಾಶವಿಲ್ಲ ಎಂದಿದ್ದಾರೆ. ‌

ಹುಬ್ಬಳ್ಳಿಯಲ್ಲಿ ಅಗಸ್ಟ್ 14 ರಂದು ಮಾದೀಗರ ವಿಜಯೋತ್ಸವಕ್ಕೆ ನಮ್ಮ ಸಂಘಟನೆಯ ಬೆಂಬಲ ಇರುವುದಿಲ್ಲ. ಪಂಜಾಬ್ ರಾಜ್ಯ ವಿರುದ್ಧ ದೇವಿಂದರ್ ಸಿಂಗ್ ಪ್ರಕರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಲ್ಲಿ ಕೆನೆಪದರ ಜಾರಿಗೆ ತರಬೇಕು ಎಂದು ಹೇಳಿರುವ ಸುಪ್ರೀಂಕೋರ್ಟ್ ತೀರ್ಪು ಸಂವಿಧಾನದ ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ದವಾಗಿದೆ. ಈ ಕುರಿತು ದೇಶವ್ಯಾಪಿ ಹೋರಾಟಗಳನ್ನು ಮಾಡಲಾಗುವುದು ಎಂದು ವಿವರಿಸಿದರು.

ಸುಪ್ರೀಂಕೋರ್ಟ್ ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಅಂಶವು ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದಿರುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಸ್ವಾಗತಾರ್ಹವಾಗಿದೆ ಎಂದರು.

ಸುಪ್ರೀಂಕೋರ್ಟ್ ತೀರ್ಪಿನ ಅಪಾಯಕಾರಿ ಅಂಶಗಳ ಕುರಿತಂತೆ ಕಾನೂನು ಹೋರಾಟ ಮತ್ತು ದೇಶವ್ಯಾಪಿ ಜನ ಚಳುವಳಿ ನಡೆಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಶಿಕಾಂತ್ ಬಿಜವಾಡ, ಪ್ರಕಾಶ ಕ್ಯಾರಕಟ್ಟಿ, ಭೀಮಣ್ಣ ರಜಪೂತ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ