LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪ್ರಯಾಣಿಕರನ್ನು ಹತ್ತಿಸಿಕೊಳ್ಳದೇ ಹೊರಟ ವಿಮಾನಗಳು: ಪ್ರಯಾಣಿಕರ ಆಕ್ರೋಶ

ಹೈದರಾಬಾದ್03: ವಿಮಾನಯಾನ ಸಂಸ್ಥೆಯೊಂದರ ಸರ್ವರ್ ಡೌನ್‌ನಿಂದಾಗಿ ಆ ಕಂಪನಿಗೆ ಸೇರಿದ ವಿಮಾನಗಳು ಪ್ರಯಾಣಿಕರನ್ನು ಹತ್ತಿಸಿಕೊಳ್ಳದೇ ಹಾಗೆ ಹೊರಟು ಹೋಗಿರುವ ಘಟನೆ ಗುರುವಾರ ಬೆಳಗ್ಗೆ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.


ಪ್ರಯಾಣಿಕರ ಮಾಹಿತಿ ಪ್ರಕಾರ, ಪ್ರಯಾಣಿಕರು ದೇಶೀಯ ವಿಮಾನಗಳಲ್ಲಿ ಪ್ರಮುಖ ನಗರಗಳಿಗೆ ಹೋಗಲು ವಿಮಾನಯಾನ ಕಂಪನಿಯಿಂದ ಟಿಕೆಟ್ ಖರೀದಿಸಿದ್ದಾರೆ. ಕೆಲವರು ವಿಮಾನ ನಿಲ್ದಾಣವನ್ನು ತಲುಪಿ ವೆಬ್ ಚೆಕ್-ಇನ್ ಮಾಡಲು ಪ್ರಯತ್ನಿಸಿದ್ದಾರೆ ಕೂಡಾ. ಆದರೆ, ಸರ್ವರ್ ಸರಿಯಾಗಿ ಕೆಲಸ ಮಾಡಲಿಲ್ಲ. ಕೈಯಲ್ಲಿ ಟಿಕೆಟ್ ಇದ್ದರೂ ಪ್ರಯಾಣಿಕರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣಕ್ಕೆ ಸಿಬ್ಬಂದಿ ಅವರನ್ನು ಗೇಟ್ ಒಳಗೆ ಬಿಡಲಿಲ್ಲ. ತಾಳ್ಮೆ ಕಳೆದುಕೊಂಡ ಕೆಲವರು ತಾವು ಎದುರಿಸುತ್ತಿರುವ ಕಷ್ಟಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.


ತಡವಾಗಿ ಪ್ರತಿಕ್ರಿಯಿಸಿದ ಮ್ಯಾನೇಜ್‌ಮೆಂಟ್ ಇತರ ಸೇವೆಗಳಲ್ಲಿ ಅವರವರ ಸ್ಥಳಗಳಿಗೆ ಕಳುಹಿಸುವುದಾಗಿ ಭರವಸೆ ನೀಡಿದಾಗ ಪ್ರಯಾಣಿಕರು ಶಾಂತರಾದರು. ಈ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಮಸ್ಯೆ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಸರ್ವರ್ ಸಮಸ್ಯೆಯನ್ನು ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳದ್ದಾಗಿದೆ ಎಂದು ಹೇಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ