LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಕೂಲಿ ಕಾರ್ಮಿಕರಿಗೆ ಬಾಕಿ ಕೂಲಿ ತಕ್ಷಣ ಪಾವತಿಸಿ : ಸಿಇಓ

ಗ್ರಾಮೀಣ ಕೂಲಿ ಕಾರ್ಮಿಕರ ಕುಂದು ಕೊರತೆ ಆಲಿಕೆ ಸಭೆ

ಬಾಗಲಕೋಟೆ : ಆಗಸ್ಟ ೨6: ತಾಂತ್ರಿಕ ಸಮಸ್ಯೆ ಹೊರತು ಪಡಿಸಿ ಯಾವುದೇ ಕಾರಣಕ್ಕೂ ಕೂಲಿ ಬಾಕಿ ಉಳಿಯಬಾರದು. ಈಗಾಗಲೇ ಕೆಲಸ ಮಾಡಿದ ಕಾರ್ಮಿಕರಿಗೆ ಬಾಕಿ ಕೂಲಿ ಹಣವನ್ನು ಕೂಡಲೇ ಪಾವತಿಗೆ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಜಿ.ಪಂ ಸಿಇಓ ಗಜಾನನ ಬಾಲೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಜರುಗಿದ ಗ್ರಾಮೀಣ ಕೂಲಿ ಕಾರ್ಮಿಕರ ಕುಂದು ಕೊರತೆ ಆಲಿಕೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುತ್ತಲಗಿ ಗ್ರಾಮ ಪಂಚಾಯಿತಿಯಲ್ಲಿ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿಯಾಗದಿರುವ ವಿಚಾರ ಸಭೆಯಲ್ಲಿ ಪ್ರಸ್ತಾಪಿಸಿದಾಗ ಈ ಕುರಿತು ಪಿಡಿಓ ಅವರ ಬೇಜವಾಬ್ದಾರಿ ಕಂಡುಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಂದಿಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೈಯಕ್ತಿಕ ಕಾಮಗಾರಿಗಳ ಜೊತೆಗೆ ಸಾಮೂಹಿಕ ಕಾಮಗಾರಿಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಈ ಭಾಗದಲ್ಲಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸಬೇಕು ಎಂದು ಕಾರ್ಮಿಕರ ಮುಖಂಡರು ಸಭೆಯಲ್ಲಿ ಮನವಿ ಮಾಡಿದರು. ಜಮೀನು ಹೊಂದಿರುವ ಕಾರ್ಮಿಕರಿಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಿದೆ. ಇದರಿಂದ ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ನರೇಗಾ ಯೋಜನೆ ಬದಲಾವಣೆಗೊಂಡು ಇದೀಗ ವಿಬಿಜಿ-ರಾಮ್‌ಜಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಯೋಜನೆಯಡಿ ಹಲವು ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಯೋಜನೆಯ ಸಾಫ್ಟ್‌ವೇರ್ ಹೊಸದಾಗಿ ಅಪ್‌ಡೇಟ್ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಇದರಿಂದ ಕಾಮಗಾರಿ ತೆಗೆದುಕೊಳ್ಳುವಲ್ಲಿ ವಿಳಂಬವಾಗುತ್ತಿದೇ ಹೊರತು ಕೆಲಸ ನೀಡುವಲ್ಲಿ ವಿಳಂಬ ಮಾಡಲಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಕನೂರು ಗ್ರಾಮದಲ್ಲಿ ಜನವರಿ ತಿಂಗಳಲ್ಲಿ ಕೆಲಸ ನಿರ್ವಹಿಸಿರುವ ಕಾರ್ಮಿಕರಿಗೆ ಇನ್ನೂ ಕೂಲಿ ಪಾವತಿಯಾಗಿಲ್ಲ ಎಂಬ ದೂರು ಸಭೆಯಲ್ಲಿ ಕೇಳಿಬಂತು. ಮುಧೋಳ ತಾಲೂಕಿನ ಕಿತ್ತಲಿ ಗ್ರಾಮದಲ್ಲಿ ೨೪ ಕಾಮಗಾರಿಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಇರುವುದರಿಂದ ಉದ್ಯೋಗದ ಪ್ರಮಾಣ ಹೆಚ್ಚಿಸುಚಂತೆ ಮನವಿ ಮಾಡಲಾಯಿತು. ಆಲೂರು ಎಸ್.ಕೆ. ಗ್ರಾಮದಲ್ಲಿ ಇನ್ನೂ ಕೆಲಸ ನೀಡಿಲ್ಲ. ಮಾಚಕನೂರು ಗ್ರಾಮದಲ್ಲಿ ೫೦ ಕುಟುಂಬಗಳು ಜಾಬ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದರೂ, ಇದುವರೆಗೆ ಕಾರ್ಡ್ ನೀಡಿಲ್ಲ ಎಂದು ಕಾರ್ಮಿಕರು ತಿಳಿಸಿದರು. 
ಇಂಗಳಗಿ ಗ್ರಾಮದಲ್ಲಿ ಕೇವಲ ೭ ಕಾಮಗಾರಿಗಳಿದ್ದು, ೭೨ ಮಂದಿ ಕಾರ್ಮಿಕರಿರುವುದರಿಂದ ಹೆಚ್ಚಿನ ಕೆಲಸ ಒದಗಿಸಬೇಕು ಎಂದು ಮನವಿ ಮಾಡಿದರು. ಗೂಡೂರ ಗ್ರಾಮದಲ್ಲಿ ಕೆಲಸ ಮಾಡಿ ಎಂಟು ತಿಂಗಳು ಕಳೆದರೂ ಕೂಲಿ ಪಾವತಿಯಾಗಿಲ್ಲ ಎಂಬ ಗಂಭೀರ ಸಮಸ್ಯೆಯನ್ನೂ ಕಾರ್ಮಿಕರು ಅಧಿಕಾರಿಗಳ ಗಮನಕ್ಕೆ ತಂದರು. ಈ ಎಲ್ಲ ಪ್ರಕರಣಗಳನ್ನು ಪರಿಶೀಲಿಸಿ, ಅರ್ಹ ಕಾರ್ಮಿಕರಿಗೆ ಬಾಕಿ ಕೂಲಿ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಇಒ ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹೀರೆ ಮಾತನಾಡಿ, ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಪಿಡಿ ಜನರೇಷನ್ ಮಾಡಲಾಗಿದೆ. ಗುಳೇದಗುಡ್ಡ ಹಾಗೂ ಬಾದಾಮಿ ತಾಲೂಕುಗಳಲ್ಲಿ ಅರಣ್ಯ ಇಲಾಖೆಯ ಮೂಲಕ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ದೊರೆಯುವಂತೆ ಹಾಗೂ ಅವರು ನಿರ್ವಹಿಸಿದ ಕೆಲಸಕ್ಕೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಯಾಗುವಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಲೆ ಅವರು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್. ಬಸರಿಗಿಡದ ಸೇರಿದಂತೆ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಆಯಾ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.
ಛಾಯಾಚಿತ್ರ ಲಗತ್ತಿಸಿದೆ. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್