LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಲ್ಯಾಣ ಕರ್ನಾಟಕದ 80 ಗ್ರೆಡ್ 1 ಕಾರ್ಯದರ್ಶಿಗಳಿಗೆ ಪಿಡಿಓ ಬಡ್ತಿ

* 31ರಂದು ಕಲ್ಯಾಣ ಕರ್ನಾಟಕೇತರ ಬಡ್ತಿ ಪಡೆದ ಪಿಡಿಓ ಕೌನ್ಸೆಲಿಂಗ್

* ಕೌನ್ಸಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಈಶ್ವರ ಖಂಡ್ರೆ ಚಾಲನೆ 

ಬೆಂಗಳೂರು, ಜು.16: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಸ್ಥಳೀಯ ವೃಂದದ ಕಾರ್ಯದರ್ಶಿ ಗ್ರೇಡ್-1 ಅಧಿಕಾರಿಗಳಿಗೆ ಪಿಡಿಒ ಆಗಿ ಮುಂಬಡ್ತಿ ನೀಡಲಾಗಿದ್ದು, ಇಂದು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಚಾಲನೆ ನೀಡಿದರು.

ಗಾಂಧೀನಗರದಲ್ಲಿರುವ ಇಲಾಖೆಯ ಆಯುಕ್ತಾಲಯದಲ್ಲಿ ನಡೆದ ಈ ಕೌನ್ಸೆಲಿಂಗ್ ನಲ್ಲಿ ಪಿಡಿಓ ಆಗಿ ಬಡ್ತಿ ಪಡೆದ 80 ಗ್ರೇಡ್ 1 ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಗ್ರಾಮಗಳಲ್ಲಿ ಶಾಶ್ವತ ಮತ್ತು ಗುಣಮಟ್ಟದ ಆಸ್ತಿ ಸೃಜಿಸುವಲ್ಲಿ ಹಾಗೂ ದೇಶದ ಆತ್ಮವಾದ ಗ್ರಾಮಗಳ ಅಭಿವೃದ್ಧಿಯಲ್ಲಿ ಪಿಡಿಓ ಮತ್ತು ಕಾರ್ಯದರ್ಶಿಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.

ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಭಾರತದ ಜೀವನಾಡಿ. ಆದರೆ ಇಂದು ಗ್ರಾಮೀಣ ಯುವಕರು ನಗರಗಳಿಗೆ ಹೋಗಿ ನೆಲೆಸುತ್ತಿದ್ದು, ಹಳ್ಳಿಗಳು ವೃದ್ಧಾಶ್ರಮಗಳಾಗಿ ಪರಿವರ್ತನೆ ಆಗುತ್ತಿವೆ. ತಮ್ಮ ಗ್ರಾಮದಲ್ಲೇ ಯುವಜನರಿಗೆ ಉದ್ಯೋಗ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಿದರೆ, ಗ್ರಾಮಾಭಿವೃದ್ದಿಯೂ ಆಗುತ್ತದೆ. ವಲಸೆಯೂ ನಿಲ್ಲುತ್ತದೆ ಎಂದರು.

ಕಾರ್ಯದರ್ಶಿ ಮತ್ತು ಪಿಡಿಓಗಳು ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದರೆ, ಗಾಂಧೀ ಕಂಡ ಗ್ರಾಮ ರಾಜ್ಯದ ಕನಸು ನನಸಾಗುತ್ತದೆ ಎಂದರು. ಬಡ್ತಿ ಪಡೆದು ಸ್ಥಳ ನಿಯುಕ್ತಿ ಪಡೆದ ಪಿಡಿಓಗಳಿಗೆ ಅವರು ಶುಭ ಕೋರಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್