ನೇಸರಗಿ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರ )ಇವರ ಸಹೋಯೋಗದಲ್ಲಿ ಮೇಕಲಮರಡಿ ಗ್ರಾಮದ ಶ್ರೀ ಬನಶಂಕರಿ ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಎಸ್ ಡಿ ಎಂ ನಾರಾಯಣ ಹೃದಯಾಲಯ ಆಸ್ಪತ್ರೆ ಧಾರವಾಡ ಶ್ರೀ ಸಾಯಿ ದೀಪ ಕಣ್ಣಿನ ಆಸ್ಪತ್ರೆ ಶ್ರೀ ಆರ್ತೋ ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ ಉಚಿತ ಹೃದಯ ತಪಾಸಣೆ ,ಕಣ್ಣಿನ ತಪಾಸಣೆ ಮತ್ತು ಎಲಬು ಕೀಲು, ಬಿಪಿ ಶುಗರ್ ತಪಾಸಣೆ ಶಿಬಿರವನ್ನು ಶ್ರೀ ಮೂಗ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು
ಮುಖ್ಯ ಅತಿಥಿಗಳಾದ ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡದಿರುವ ಕಾರ್ಯಗಳ ಬಗ್ಗೆ ಹಾಗೂ ಅದರ ಸದುಪಯೋಗ ಬಗ್ಗೆ, ಆರೋಗ್ಯ ತಪಾಸಣೆ ಶಿಬಿರಗಳು ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ, ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು,ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದುದರೊಂದಿಗೆ ಕುಟುಂಬ ನಿರ್ವಹಣೆಯನ್ನು ಜಾಣ್ಮೆಯಿಂದ ನಿರ್ವಹಿಸುವುದು ಅಗತ್ಯವಾಗಿದೆ ಎಂದರು.
ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ ಜಕ್ಕಣ್ಣವರ ಯೋಜನೆ ಕಾರ್ಯಕ್ರಮಗಳ ಬಗ್ಗೆ ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ 200 ಗ್ರಾಮದ ಜನರು ಬಂದು ಈ ಉಚಿತ ತಪಾಸಣೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಪರೀಕ್ಷೆ ಮತ್ತು ಕಣ್ಣಿನ ತಪಾಸಣೆ , ಬಿ ಪಿ ಶುಗರ್ ಮತ್ತು ಎಲಬು ಕೀಲು ತಪಾಸಣೆ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ ಪಂ. ಮಾಜಿ ಅಧ್ಯಕ್ಷರಾದ ಗೌಡಪ್ಪ ಯರಡಾಲ, ಮಾಜಿ ಸದಸ್ಯರಾದ ಚಂದ್ರಯ್ಯ ಹಿರೇಮಠ, ನಿಂಗಪ್ಪ ಕುರುಗುಂದ, ಪಿ ಕೆ ಪಿ ಎಸ್ ಸದಸ್ಯರು, ಡಾ. ಪ್ರಕಾಶ ಹಳ್ಯಾಳ , ಎಸ್ ಡಿ ಎಂ ನಾರಾಯಣ ಹೃದಯಾಲಯ ,ಧಾರವಾಡ, ಶ್ರೀ ಸಾಯಿ ದೀಪ ಕಣ್ಣಿನ ಅಸ್ಪತ್ರೆ ಬೆಳಗಾವಿ ,ಶ್ರೀ ಎಲುಬು ಕಿಲು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇದ್ದರು.
ನಿರೂಪಣೆ ಜ್ಞಾನವಿಕಾಸ ಸಮನ್ವಯಾಧಿಕಾರಿ ಶೈಲಾ, ಸ್ವಾಗತ ಪದ್ಮ ಕಡಟ್ಟಿ, ವಂದನೆ ಸೇವಾ ಪ್ರತಿನಿಧಿ ಶೀಲಾ ಕಡಟ್ಟಿ , ಹಾಗೂ ಒಕ್ಕೂಟ ಅಧ್ಯಕ್ಷರು ,ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷರು ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
