Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿ


ಮೂಡಲಗಿ : ವಿಕಲ ಚೇತನರಿಗೆ ಡಾಲ್ಮಿಯಾ ಭಾರತ್ ಸಿಮೆಂಟ್ ಕಾರ್ಖಾನೆಯವರು ಕನ್ನಡ ರಾಜ್ಯೋತ್ಸವದ ಈ ಶುಭ ದಿನದಂದು ಮೋಟರ ಟ್ರೈ ಸೈಕಲ್ (ತ್ರಿಚಕ್ರ ಟಿವಿಎಸ್ ಸ್ಕೂಟಿ) ವಿತರಿಸಿರುವುದು ಅತೀವ ಸಂತಸವುಂಟಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹ? ವ್ಯಕ್ತಪಡಿಸಿದರು.
ರವಿವಾರ ಇಲ್ಲಿಯ ಎಸ್‌ಎಸ್‌ಆರ್ ಮಹಾವಿದ್ಯಾಲಯದ ಆವರಣದಲ್ಲಿ ಡಾಲ್ಮಿಯಾ ಭಾರತ್ ಸಿಮೆಂಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ೧೦೩ ಮತ್ತು ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಇಲಾಖೆಯಿಂದ ೧೦ ಒಟ್ಟು ೧೧೩ ವಿಕಲ ಚೇತನ ಫಲಾನುಭವಿಗಳಿಗೆ ಮೋಟರ ಟ್ರೈ ಸೈಕಲ್ ವಿತರಿಸಿ ಮಾತನಾಡಿದ ಅವರು, ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಲು ಇಂಥ ಸಾಮಾಜಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎಂದರು. ಡಾಲ್ಮಿಯಾ ಭಾರತ್ ಸಿಮೆಂಟ್ ಕಾರ್ಖಾನೆಯು ಕೇವಲ ವ್ಯವಹಾರದ ಲಾಭದ ದೃಷ್ಟಿಯಿಂದ ಯೋಚಿಸದೇ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಧಾರ್ಮಿಕ ಮುಂತಾದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಬಣ್ಣಿಸಿದರು.
ಯಾದವಾಡ ಭಾಗದ ರೈತರು ಜಮೀನು ನೀಡಿದ್ದರಿಂದಲೇ ನಮ್ಮ ಅರಭಾವಿ ಕ್ಷೇತ್ರದಲ್ಲಿ  ದೆಹಲಿ ಮೂಲದ  ಡಾಲ್ಮಿಯಾ ಭಾರತ್ ಸಿಮೆಂಟ್ ಕಾರ್ಖಾನೆಯು ಆರಂಭವಾಗಿದ್ದು, ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ೧೦೩ ವಿಕಲ ಚೇತನರಿಗೆ  ತ್ರಿಚಕ್ರ ಟಿವಿಎಸ್ ಸ್ಕೂಟಿ ವಿತರಿಸುತ್ತಿದ್ದರೂ ಇನ್ನೂ ಹಲವು ಜನ ಅಗತ್ಯವಿರುವ  ದಾಖಲಾತಿಗಳನ್ನು ಕೊಟ್ಟಿಲ್ಲ, ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ವಿಕಲಚೇತನರಿಗೆ ಮೋಟರ ಟ್ರೈ ಸೈಕಲ್ ನೀಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಡಾಲ್ಮಿಯಾ ಭಾರತ್ ಸಿಮೆಂಟ್ ಕಾರ್ಖಾನೆಯ ಕಾರ್ಯಕಾರಿ ನಿರ್ದೇಶಕ ಮತ್ತು ಬೆಳಗಾವಿ ಯುನಿಟ್ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್  ಮಾತನಾಡಿ, ಡಾಲ್ಮಿಯಾ ಕಾರ್ಖಾನೆಯು  ಸಮಾಜಸೇವೆಯ ಮೂಲಕ ಅನೇಕ ಕಡೆಗಳಲ್ಲಿ ಜನರಿಗೆ ಹತ್ತಿರವಾಗುವ ಕೆಲಸಗಳನ್ನು ಮಾಡುತ್ತಿದ್ದೇವೆ. ದೇಶದಲ್ಲಿ ಸುಮಾರು ೧೫ ಸಿಮೆಂಟ್ ಕಾರ್ಖಾನೆಗಳಿದ್ದು, ವಿವಿಧ ರೀತಿಯ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದೇವೆ. ಯಾದವಾಡ ಭಾಗದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಸಹಕಾರದಿಂದ ಸಿಮೆಂಟ್ ಕಾರ್ಖಾನೆಯು ಕಾರ್ಯ ನಿರ್ವಹಿಸುತ್ತಿದೆ. ಮುಂದೆಯೂ ಸಹ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಇನ್ನೂ ಹಲವಾರು  ಸಮಾಜಸೇವೆಯನ್ನು ಮಾಡುವುದಾಗಿ ಹೇಳಿದರು.
 ಈ ಸಂದರ್ಭದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ  ಅಧ್ಯಕ್ಷ ವೆಂಕಟೇಶ ಸೋನವಾಲಕರ, ತಹಶೀಲ್ದಾರ ಶ್ರೀಶೈಲ ಗುಡುಮೆ, ಚಾರ್ಟರ್ಡ್ ಅಕೌಂಟೆಂಟ್ ಸೈದಪ್ಪ ಗದಾಡಿ, ಶಿಶು ಅಭಿವೃದ್ಧಿ ಅಧಿಕಾರಿ ವೈ.ಕೆ.ಗದಾಡಿ,  ರವೀಂದ್ರ ಸೋನವಾಲಕರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಬೆಮುಲ್ ನಿರ್ದೇಶಕ ಬಸವರಾಜ ಮಾಳೇದವರ, ಗಿರೀಶ ಢವಳೇಶ್ವರ, ರಾಜು ಬೈರುಗೋಳ, ಅನ್ವರ ನದಾಫ,  ಮರೆಪ್ಪ ಮರೆಪ್ಪಗೋಳ, ವಿಠಲ ಸವದತ್ತಿ, ಶಂಕರ ಬೆಳಗಲಿ, ಲಕ್ಷ್ಮಣ ಪಾಟೀಲ, ಪ್ರಭಾ ಶುಗರ್ಸ್ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಬ್ಬೂರ,  ಜಯಾನಂದ ಪಾಟೀಲ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಶಿವು ಚಂಡಕಿ, ರವೀಂದ್ರ ಸಣ್ಣಕ್ಕಿ, ಹಣಮಂತ ಗುಡ್ಲಮನಿ, ಅಮಿನಸಾಬ ಎಳ್ಳೂರ, ಡಾಲ್ಮಿಯಾ ಕಾರ್ಖಾನೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪುರಸಭೆಯ ಮಾಜಿ ಸದಸ್ಯರು, ಕನ್ನಡ ಪರ ಸಂಘಟನೆಗಳ ಪ್ರಮುಖರು, ಯಾದವಾಡ ಭಾಗದ ಅನೇಕ ಮುಖಂಡರು ಉಪಸ್ಥಿತರಿದ್ದರು. ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಂಡ ಬೈಕ್ ರ್ಯಾಲಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಚಾಲನೆ ನೀಡಿದರು. ಕಾಲೇಜಿನಿಂದ ಕಲ್ಲೇಶ್ವರ ವೃತ್ತ  ಮತ್ತು ಅಲ್ಲಿಂದ ಮೂಡಲಗಿ ಕ್ರಾಸ್ ವರೆಗೆ ಬೈಕ್ ರ್ಯಾಲಿ ನಡೆಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ