Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣ: ಪಿಡಿಓ ನಶ್ರದ್ ಬಾನು

ಬಳ್ಳಾರಿ,ಫೆ.06- ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣವಾಗುತ್ತಿದೆ ಎಂದು ಶಿಡಗಿನಮೊಳ ಗ್ರಾಮಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಶ್ರದ್  ಬಾನು ಅವರು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಮೀನಳ್ಳಿ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಹಲವಾರು ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಕ್ಷಯ ಕಲಾ ಟ್ರಸ್ಟ್ ಹೊಸ ಯರಗುಡಿ ತಂಡವು ರಾಜ್ಯ ಸರ್ಕಾರದ ಯೋಜನೆಗಳನ್ನು ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಶಿಡಗಿನಮೊಳ ಗ್ರಾಪಂ ಅಧ್ಯಕ್ಷರಾದ ಸುಜಾತ ತಾಯಣ್ಣ, ಉಪಾಧ್ಯಕ್ಷ ಮಹಾನಂದಿ ತಿಮ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ವರಲಕ್ಷಿö್ಮ, ಅಕ್ಷಯ ಕಲಾ ಟ್ರಸ್ಟ್ ನ  ಅಧ್ಯಕ್ಷ ಹಾಗೂ ಕಲಾವಿದ ಹೆಚ್.ಜಿ.ಸುಂಕಪ್ಪ, ಕಲಾವಿದರಾದ ಸರ್ವಮಂಗಳಮ್ಮ, ಪಾರ್ವತಿ, ದೇವೇಂದ್ರಪ್ಪ, ತಮಟೆ ವಾದಕರಾಗಿ ಸೋಮಶೇಖರ್, ನಾಗಮೂರ್ತಿ ಸೇರಿದಂತೆ ಗ್ರಾಮದ ಸಾರ್ವಜನಿಕರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*