Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಶೇ. 72.23 ಮತದಾರರಿಗೆ ಗಣತಿ ನಮೂನೆಗಳ ವಿತರಣೆ



ಧಾರವಾಡ,08 : ಚುನಾವಣಾ ಆಯೋಗದ ಸೂಚನೆ ಮೆರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ, ಧಾರವಾಡ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಜೂನ್ 30, 2026 ರಿಂದ ಜುಲೈ 29, 2026 ರವರೆಗೆ ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿ, ಏಣಿಕೆ, ಗಣತಿ ನಮೂನೆಗಳನ್ನು (Enumeration Forms) ವಿತರಣೆ ಮಾಡಲಾಗುತ್ತಿದ್ದು, ಧಾರವಾಡ ಜಿಲ್ಲೆಯ ಮತಗಟ್ಟೆ ಮಟ್ಟದ ಅಧಿಕಾರಿಗಳು ಜುಲೈ 07, 2026 ವರೆಗೆ ಶೇ. 72.23 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಣೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.

69-ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಶೇ. 97.70 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 4.18 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 70-ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80.70 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 1.06 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 71-ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 77.98 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 4.48 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 72-ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಶೇ. 65.98 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.0.71 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ.

73-ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಶೇ.52.90 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.80 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶೇ.54.51 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 1.27 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 75-ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 87.83 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.3.50 ಭರ್ತಿ ಮಾಡಿದ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ.

ಒಟ್ಟು 7 ವಿಧಾನ ಸಭಾ ಕ್ಷೇತ್ರದಲ್ಲಿ ಶೇ. 72.23 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.2.20 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ. 
ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿದ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು, ಮತದಾರರು ತಮ್ಮ ಅವಶ್ಯಕ ಮಾಹಿತಿಗಳನ್ನು ಭರಣಾ ಮಾಡಿದ ಏಣಿಕೆ, ಗಣತಿ ನಮೂನೆಗಳನ್ನು (Enumeration Forms) BLOರವರಿಗೆ ನೀಡಿ ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ