ದಿ.4ರಂದು ವಕ್ಫ್ ಕಾಯ್ದೆಯ ದುರ್ಬಳಕೆ ಖಂಡಿಸಿ ಮನವಿ
ಮೂಡಲಗಿ : ಕರ್ನಾಟಕದಲ್ಲಿ ಇಂದು ವಕ್ಫ್ ಕಾಯ್ದೆಯ ದುರ್ಬಳಕೆಯ ಕಾರಣಕ್ಕಾಗಿ ರೈತರು ಮಠಮಾನ್ಯಗಳು, ಹಿಂದೂ ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ. ಈ ಕಾಯ್ದೆಯಲ್ಲಿರುವ ಅಂಶಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರದ ವಕ್ಸ್ ಬೋರ್ಡ್ ಕರ್ನಾಟಕ ಸರ್ಕಾರದ ಭಾಗವಾಗಿದ್ದರೂ, ಕರ್ನಾಟಕ ಸರ್ಕಾರದ ಹಿಡಿತದಲ್ಲಿ ಎಷ್ಟರಮಟ್ಟಿಗೆ ಇದೆ ಎನ್ನುವ ಪ್ರಶ್ನೆ ಕಾಡುತ್ತಿದ್ದು ಇದನ್ನು ಖಂಡಿಸಿ ತಹಶೀಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲು ಸೋಮವಾರ ದಿ.4ರಂದು ಬೆಳಗ್ಗೆ 10ಗಂಟೆಗೆ ಮೂಡಲಗಿ ತಹಶೀಲ್ದಾರ ಕಚೇರಿಯಲ್ಲಿ ಎಲ್ಲ ಬಿಜೆಪಿಯ ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಜೆಪಿಯ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿಯವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.