ಬಳ್ಳಾರಿ. ಏ. 28:. ಗೋಹತ್ಯೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಗೋವಿನ ರಕ್ಷಣೆಗೆ ಸರ್ಕಾರಗಳು ಕಠಿಣ ಕಾನೂನು ಕ್ರಮಗಳೊಂದಿಗೆ ಮುಂದಾಗಬೇಕು ಎಂದು ಆಗ್ರಹಿಸಿ ಹಿಂದುಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಹೊಸ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯ ಮೂಲಕ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಪರ
ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳ ಹಸುವನ್ನು ದೇವರ ಸ್ವರೂಪವಾಗಿ ಕಾಣಲಾಗುತ್ತದೆ. ಆದರೆ ವಿವಿಧೆಡೆ ಗೋಹತ್ಯೆ ನಡೆಯುತ್ತಿರುವುದು ಆತಂಕಕಾರಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಗೋಮಾತೆಯ ರಕ್ಷಣೆಗೆ ಕಠಿಣ ಕಾನೂನುಗಳನ್ನು ಜಾರಿಗೊಳಿಸುವ ಜೊತೆಗೆ ಅಕ್ರಮ ಗೋ ಸಾಗಣೆ ಹಾಗೂ ವಧೆ ತಡೆಯಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ನಗರದ ಸಂಗಮ್ ವೃತ್ತದಲ್ಲಿ ಸೇರಿದ್ದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಗೋ ಸಂರಕ್ಷಣೆ ಕೇವಲ ಧಾರ್ಮಿಕ ಭಾವನೆಗೆ ಸೀಮಿತವಲ್ಲ, ಅದು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ವಿಷಯವಾಗಿದೆ ಎಂದರು. ಗೋಹತ್ಯೆ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮನವಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಕಠಿಣವಾಗಿ ಜಾರಿಗೆ ತರಬೇಕು, ಅಕ್ರಮ ಗೋ ಸಾಗಣೆ ತಡೆಯಬೇಕು, ಗೋಶಾಲೆಗಳಿಗೆ ನೆರವು ಹೆಚ್ಚಿಸಬೇಕು ಹಾಗೂ ಗೋ ರಕ್ಷಣೆಗೆ ವಿಶೇಷ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಹಿಂದುಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.