LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆರೆ ನಿರ್ಮಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಬಳ್ಳಾರಿ,ಮಾ.14:: ಹರಗಿನಡೋಣಿ ಗ್ರಾಮಕ್ಕೆ ಕುಡಿಯುವ ನೀರಿನ ಕೆರೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯ ಹಿನ್ನೆಲೆಯಲ್ಲಿ ಡಿಸಿ ಯವರನ್ನು ಬೇಟಿ ಮಾಡಲಾಯಿತು. ಡಿಸಿ ಯವರು ಎಲ್ಲಾ ಬೇಡಿಕೆಗಳನ್ನು ಸಂಬAಧ ಪಟ್ಟ ಅಧಿಕಾರಿಗಳಿಗೆ ಫೋನ್ ಮಾಡಿ ಮಾತನಾಡಿದರು. ಕೆ.ಎಂ.ಇ.ಆರ್.ಸಿ ಹಣದಿಂದ ಈ ಸಲ ಮೊದಲನೇ ಆದ್ಯತೆಯಾಗಿ ಕೆರೆ ನಿರ್ಮಾಣ ಖಂಡಿತವಾಗಿ ಮಾಡೇ ಮಾಡುತ್ತೇವೆ ಎಂದು ಕೂಲಂಕಷವಾಗಿ ಚರ್ಚಿಸಿ ಒಂದು ದಿನ ಊರಿಗೆ ಬರುತ್ತೇನೆ ಎಂದು ಭರವಸೆ ನೀಡಿದರು.

ಇನ್ನುಳಿದ ಬೇಡಿಕೆಗಳಿಗೆ ಸಂಬAಧಿಸಿದAತೆ ವಸತಿ ಸಂಬAಧಪಟ್ಟ ಹಾಗೆ ಸಂಪೂರ್ಣವಾಗಿ ವಸತಿಹೀನರು ನಿವೇಶನಹೀನರಿಗೆ ಮೊದಲ ಆದ್ಯತೆಯಾಗಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಹಾಗೆಯೇ ಈಗಾಗಲೇ ಭೂಮಿಯನ್ನು ಗುರುತಿಸಲ್ಲಾಗಿದೆ ಎಂದು ತಿಳಿಸಿದರು.ಹಾಗೆಯೇ ಕಾರ್ಮಿಕರಿಗೆ ಕೆಲಸ, ಮಹಿಳೆಯರಿಗೆ ಕರಕೌಶಲ್ಯ ಕೆಲಸ ಈ ವಿಷಯಕ್ಕೆ ಸಂಬAಧಿಸಿದ ಒಂದು ಸಭೆ ನಡೆಸಿ ಕಾರ್ಯ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು ಹಾಗೆಯೇ ಗ್ರಾಮದ ಸುತ್ತಮುತ್ತಲಿನ ಕೈಗಾರಿಕೆಗಳಿಂದ ಆಗುತ್ತಿರುವ ವಾಯುಮಾಲಿನ್ಯ ಕುರಿತು ಕೂಡಲೇ ಮಾಲಿನ್ಯ ನಿಯಂತ್ರಣ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ನಿರ್ದೇಶಿಸುವುದಾಗಿ ಹೇಳಿದರು ಹಾಗೆಯೇ ಬೆಳಗಲ್ ಗ್ರಾಮದಲ್ಲಿ ನಿರ್ಮಾಣ ಆದ ಆಸ್ಪತ್ರೆಯ ಪ್ರಾರಂಭಕ್ಕೆ ಸಂಬAಧಿಸಿದAತೆ  ಜಿಲ್ಲಾ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ ಈಗಾಗಲೇ ಮೂಲ ಸೌಕರ್ಯಗಳು ಮತ್ತು ಸಿಬ್ಬಂದಿಗಳಿಗೆ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇಂದು ನಿಯೋಗದಲ್ಲಿ ಗಣಿಪಾದಿತ ಪರಿಸರ ಮತ್ತು ಜನಪದ ಹೋರಾಟ ಸಮಿತಿಯ ರಾಜ್ಯ ಸಂಚಾಲಕರರಾದ ಡಿ ನಾಗಲಕ್ಷ್ಮಿ ರಾಜ್ಯ ಸಮಿತಿ ಸದಸ್ಯರಾದ  ಆರ್ ಸೋಮಶೇಖರ್ ಗೌಡ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷರಾದ ಎ ದೇವದಾಸ್ ಗ್ರಾಮದ ಮಾಜಿ ಉಪಾಧ್ಯಕ್ಷರಾದ ಚಂದ್ರ ಮಾಜಿ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮೀ ,ಎಗ್ಗೆ ಶಿವರಾಮ,ಆಲ್ದಳ್ಳಿ ರಮೇಶ್,ಯಂಕಾರೆಡ್ಡಿ ಇನ್ನಿತರ ಮುಖಂಡರಗಳು ಜಿಲ್ಲಾಧಿಕಾರಿಗಳ ಭೇಟಿ ಮಾಡಿದ ನಿಯೋಗದಲ್ಲಿ ಇದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್