Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್ ಕ್ರಿಕೆಟ್ ಟೂರ್ನಿ: ಬ್ಲೂ ರೈಡೆರ್ಸ್ ಚಾಂಪಿಯನ್

ಬಳ್ಳಾರಿ, ಜೂ.19:: ಬಳ್ಳಾರಿ ಜಿಲ್ಲಾ ಮತ್ತು ತಾಲೂಕು ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 11ನೇ ಸೀಸನ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬ್ಲೂ ರೈಡೆರ್ಸ್ ತಂಡವು ಸಿರುಗುಪ್ಪ Xl ತಂಡವನ್ನು 24 ರನ್‌ಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
ನಗರದ ವೀರಶೈವ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಈ ಪಂದ್ಯಾವಳಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬ್ಲೂ ರೈಡೆರ್ಸ್ ತಂಡ ನಿಗದಿತ 10 ಓವರ್‌ಗಳಲ್ಲಿ 76 ರನ್‌ಗಳನ್ನು ಕಲೆಹಾಕಿತು.
ಗೆಲುವಿನ ಗುರಿ ಬೆನ್ನತ್ತಿದ ಸಿರುಗುಪ್ಪ XL ತಂಡವು ಬ್ಲೂ ರೈಡೆರ್ಸ್ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿ 10 ಓವರ್‌ಗಳಲ್ಲಿ 52 ರನ್‌ಗಳಿಗೆ ಸೀಮಿತವಾಯಿತು. ಇದರೊಂದಿಗೆ ಬ್ಲೂ ರೈಡೆರ್ಸ್ ತಂಡವು 24 ರನ್‌ಗಳ ಭರ್ಜರಿ ಜಯ ಸಾಧಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.
ಪಂದ್ಯಾವಳಿಯ ವಿಜೇತ ತಂಡಕ್ಕೆ ₹30,000 ನಗದು ಬಹುಮಾನ ಹಾಗೂ ಟ್ರೋಫಿ, ರನ್ನರ್-ಅಪ್ ಸಿರುಗುಪ್ಪ XL ತಂಡಕ್ಕೆ ₹20,000 ನಗದು ಬಹುಮಾನ ಹಾಗೂ ಟ್ರೋಫಿ ಪ್ರದಾನ ಮಾಡಲಾಯಿತು.
ವೈಯಕ್ತಿಕ ಪ್ರಶಸ್ತಿಗಳ ವಿಭಾಗದಲ್ಲಿ ರಾಜ್ ಪಂದ್ಯಶ್ರೇಷ್ಠ (Man of the Match), ಜೀಲನ್ ಅತ್ಯುತ್ತಮ ಬೌಲರ್, ಖಾಜಾ ಅತ್ಯುತ್ತಮ ಬ್ಯಾಟ್ಸ್‌ಮನ್ ಹಾಗೂ ಪಂಪಯ್ಯ ಸ್ವಾಮಿ ಸರಣಿಶ್ರೇಷ್ಠ (Man of the Series).
 ಅತ್ಯುತ್ತಮ ಫೀಲ್ಡಿಂಗ್  ದೂದ್   ಪ್ರಶಸ್ತಿಗಳನ್ನು ಪಡೆದರು. ಸಮಾರೋಪ ಸಮಾರಂಭದಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳು, ಸದಸ್ಯರು, ಕ್ರೀಡಾಭಿಮಾನಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ವಿಜೇತ ಮತ್ತು ರನ್ನರ್-ಅಪ್ ತಂಡಗಳಿಗೆ ಅಭಿನಂದನೆ ಸಲ್ಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ