LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ

ನವದೆಹಲಿ, ಜುಲೈ 16: ಮುಂದಿನ ವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ಇರುವ ನಿರೀಕ್ಷೆಗಳಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳವೂ ಇದೆ. ವರದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಗೆ ಬಜೆಟ್​ನಲ್ಲಿ ನೀಡಲಾಗುವ ಹಣದಲ್ಲಿ ಶೇ. 30ರಷ್ಟು ಹೆಚ್ಚಳ ಆಗಬಹುದು ಎನ್ನಲಾಗುತ್ತಿದೆ. ಮಧ್ಯಂತ ಬಜೆಟ್​ನಲ್ಲಿ ಈ ಯೋಜನೆಗೆ ಒಂದು ವರ್ಷಕ್ಕೆ 60,000 ಕೋಟಿ ರೂ ಎತ್ತಿ ಇಡಲಾಗಿತ್ತು. ಜುಲೈ 17ರ ಬಜೆಟ್​ನಲ್ಲಿ ಈ ಹಂಚಿಕೆಯನ್ನು 80,000 ಕೋಟಿ ರೂಗೆ ಹೆಚ್ಚಿಸಬಹುದು ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ ಈ ಬಾರಿಯ ಬಜೆಟ್​ನಲ್ಲಿ ಯುವಜನರು, ಮಹಿಳೆಯರು, ರೈತರು ಮತ್ತು ಗ್ರಾಮೀಣಭಾಗ ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ಕೊಡಬಹುದು. ಹೀಗಾಗಿ, ಪಿಎಂ ಕಿಸಾನ್ ಯೋಜನೆಗೆ ಹಣ ಹಂಚಿಕೆ ಹೆಚ್ಚಿಸುವ ಸಾಧ್ಯತೆ ಗಟ್ಟಿಯಾಗಿದೆ. ರೈತ ಸಂಘಟನೆಗಳ ಪ್ರತಿನಿಧಿಗಳು ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಪಿಎಂ ಕಿಸಾನ್ ಯೋಜನೆ ಹಾಗು ಇತರ ಯೋಜನೆಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿ ರೈತರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ಸದ್ಯ, ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ