Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

32ನೇ ಅಂತಾರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

ದೆಹಲಿ, ಆ.3: ಪ್ರಧಾನಿ ಮೋದಿ ಅವರು ಇಂದು (ಆ.3) ದೆಹಲಿಯಲ್ಲಿ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು (ಐಸಿಎಇ) ಉದ್ಘಾಟಿಸಿದರು. ಆಗಸ್ಟ್ 2 ರಿಂದ 7ವರೆಗೆ ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ತ್ರೈವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 65 ವರ್ಷಗಳ ನಂತರ ಭಾರತದಲ್ಲಿ ಇಂತಹ ಸಮಾವೇಶವನ್ನು ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನೀವೆಲ್ಲರೂ ವಿಶ್ವದ ವಿವಿಧ ದೇಶಗಳಿಂದ ಬಂದಿದ್ದೀರಿ. 120 ಮಿಲಿಯನ್ ರೈತರ ಪರವಾಗಿ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಭಾರತದ 30 ದಶಲಕ್ಷಕ್ಕೂ ಹೆಚ್ಚು ಮಹಿಳಾ ರೈತರು ಹಾಗೂ ದೇಶದ 30 ದಶಲಕ್ಷ ಮೀನುಗಾರರ ಪರವಾಗಿ 550 ದಶಲಕ್ಷ ಪ್ರಾಣಿಗಳು ವಾಸಿಸುವ ಹಾಗೂ ಈ ಕೃಷಿ ಪ್ರಧಾನ ಮತ್ತು ಪ್ರಾಣಿಗಳನ್ನು ಪ್ರೀತಿಸುವ ಈ ದೇಶಕ್ಕೆ ಸ್ವಾಗತ ಎಂದು ಹೇಳಿದರು.

ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ಆಯೋಜಿಸಿರುವ ಈ ಆರು ದಿನಗಳ ಸಮ್ಮೇಳನದಲ್ಲಿ ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಮ್ಮ ಹವಮಾನದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಬೇಕಿದೆ. ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಸುಸ್ಥಿರ ಕೃಷಿಯ ಅಗತ್ಯಗಳನ್ನು ನಿಭಾಯಿಸುವ ಬಗ್ಗೆ ಈ ಸಮ್ಮೇಳದಲ್ಲಿ ಚರ್ಚಿಸಬೇಕಾಗಿದೆ.

ಸಮ್ಮೇಳನವು ಜಾಗತಿಕ ಕೃಷಿಕರು ಅನುಭವಿಸುತ್ತಿರುವ ಸವಾಲುಗಳ ಬಗ್ಗೆ ಭಾರತದ ಕೃಷಿಗಳು ಹೇಗೆ ಸಹಾಯವಾಗಿದೆ ಹಾಗೂ ಪೂರಕವಾಗುವ ವಿಧಾನಗಳ ಬಗ್ಗೆ ತಿಳಿಸಲಿದ್ದಾರೆ. ICAE 2024 ಯುವ ಸಂಶೋಧಕರು ಮತ್ತು ಪ್ರಮುಖ ವೃತ್ತಿಪರಿಗೆ ಈ ವೇದಿಕೆ ತುಂಬಾ ಸಹಾಯವಾಗಲಿದೆ. ಸಂಶೋಧನಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ನೀತಿ ರಚನೆ ಪರಿಣಾಮ ಏನು ಎಂಬ ಬಗ್ಗೆ ಇಲ್ಲಿ ತಿಳಿಸಲಾಗುತ್ತದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ