LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಚಂಡು ಎಸೆತ ನಲ್ಲಿ ಪಿಎಂ ಶ್ರೀ ಬಾಲಕಿಯರ ಮೇಲುಗೈ.

ಮುಗಳಖೋಡ (೨): ರಾಯಬಾಗ ತಾಲೂಕಿನ ಶಾಲಾ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳು ರಾಯಬಾಗ ಇವರ ಸಹಯೋಗದಲ್ಲಿ ಮುಗಳಖೋಡ ಪಟ್ಟಣದ ಪಿ ಎಂ ಶ್ರೀ  ಸರಕಾರಿ ಸಂಯುಕ್ತ ಪ್ರೌಢಶಾಲೆ, ( ಪ್ರಾಥಮಿಕ ವಿಭಾಗ )ದ ಶಾಲಾ ಆವರಣದಲ್ಲಿ ಸನ್ 2026-27 ನೇ ಸಾಲಿನ ಕೇಂದ್ರ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. 
 ಈ ಕ್ರೀಡಾಕೂಟದಲ್ಲಿ ಮುಗಳಖೋಡ ಪಟ್ಟಣದ ಸರಕಾರಿ, ಅನುದಾನಿತ ಹಾಗು ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ವೈಯಕ್ತಿಕ ಹಾಗೂ ಗುಂಪು ಆಟಗಳನ್ನು ಹಮ್ಮಿಕೊಳ್ಳಲಾಗಿತ್ತು.
 ಚೆಂಡು ಎಸೆತ  ಬಾಲಕಿಯರ ವಿಭಾಗದಲ್ಲಿ ಪಿಎಂ ಶ್ರೀ ಶಾಲೆಯ ವಿದ್ಯಾರ್ಥಿಯರ ತಂಡ ವಿಜಯಶಾಲಿಯಾದರೆ, ಬಾಲಕರ ವಿಭಾಗದಲ್ಲಿ ಶ್ರೀ ಮುರುಘರಾಜೇಂದ್ರ ಶಾಲೆಯ ವಿದ್ಯಾರ್ಥಿಗಳು ಜಯಶಾಲಿಯಾದರು. ಕಬ್ಬಡ್ಡಿ ಪಂದ್ಯದಲ್ಲಿ ಬಾಲಕರ ವಿಭಾಗದಲ್ಲಿ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಬಾಲಕಿಯರ ವಿಭಾಗದಲ್ಲಿ ಬ ನೀ ಕು  ಶಾಲೆಯ ವಿದ್ಯಾರ್ಥಿನಿಯರು ದಿಗ್ವಿಜಯ ಸಾಧಿಸಿದರು. ಖೋ ಖೋ ವಿಭಾಗದಲ್ಲಿ ಸಿದ್ದಶ್ರೀ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರಲಕೋಡಿ, ವಾಲಿಬಾಲ್ ವಿಭಾಗದಲ್ಲಿ ಆದರ್ಶ ಹಿರಿಯ ಪ್ರಾಥಮಿಕ ಶಾಲೆಯ  ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಜಯ ಸಾಧಿಸಿ ವಲಯ ಮಟ್ಟಕ್ಕೆ ಆಯ್ಕೆಯಾದರು.
 ಕ್ರೀಡಾಕೂಟದಲ್ಲಿ ವಿಜಯಶಾಲಿಯಾದ ವಿದ್ಯಾರ್ಥಿಗಳಿಗೆ ಹಾಗೂ ತಂಡಗಳಿಗೆ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆ (ಪ್ರಾಥಮಿಕ ವಿಭಾಗ) ಮುಖ್ಯ ಗುರುಗಳಾದ ವಿ ಬಿ ಗಸ್ತಿ  ಹಾಗು ಸಕಲ ಗುರುವೃಂದ ಅಭಿನಂದನೆ ಸಲ್ಲಿಸಿದರು . ಕ್ರೀಡಾಕೂಟದಲ್ಲಿ ಜಯಗಳಿಸಿದ ವಿದ್ಯಾರ್ಥಿ  ವಿದ್ಯಾರ್ಥಿನಿಯರು ಸಂಭ್ರಮಿಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹ