Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಣ್ಣ ಆಹಾರ ಉದ್ಯಮಗಳಿಗೆ ಪಿಎಂಎಫ್‌ಎAಇ ಯೋಜನೆ


ಬಳ್ಳಾರಿ,ಮೇ 12 : ಸಣ್ಣ ಮತ್ತು ಕಿರು ಆಹಾರ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹಾಗೂ ಗ್ರಾಮೀಣ ಭಾಗದ ಉದ್ಯಮಗಳನ್ನು ಆರ್ಥಿಕವಾಗಿ ಸಬಲೀಕರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಜಿಲ್ಲೆಯ ರೈತರು ಮತ್ತು ಯುವ ಉದ್ಯಮಿಗಳಿಗೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ನಡೆಸುತ್ತಿರುವ ಉದ್ಯಮಿಗಳು ತಮ್ಮ ವ್ಯವಹಾರವನ್ನು ಅಧಿಕೃತವಾಗಿ ನೋಂದಾಯಿಸಿಕೊಳ್ಳಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಅವಕಾಶವಿದೆ.
ಆಹಾರ ಸಂಸ್ಕರಣಾ ಯಂತ್ರೋಪಕರಣಗಳ ಖರೀದಿಗೆ ಒಟ್ಟು ಶೇ.50 ಸಹಾಯಧನ ದೊರೆಯಲಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.35 ಆಗಿದ್ದರೆ, ರಾಜ್ಯ ಸರ್ಕಾರವು ಶೇ.15 ರಷ್ಟು ನೆರವು ನೀಡುತ್ತದೆ. ಉದ್ದಿಮೆದಾರರಿಗೆ ಬ್ಯಾಂಕ್‌ಗಳ ಮೂಲಕ ಶೇ.90 ರಷ್ಟು ಸುಲಭ ಸಾಲದ ಸೌಲಭ್ಯವನ್ನು ಒದಗಿಸಲಾಗುವುದು.
ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಗತ್ಯವಾದ ತಾಂತ್ರಿಕ ತರಬೇತಿಯನ್ನು ನೀಡಲಾಗುತ್ತದೆ. ಸಣ್ಣ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಮಾರುಕಟ್ಟೆ ಪ್ರವೇಶಿಸಲು ನೆರವು ನೀಡಲಾಗುತ್ತದೆ.
*ಯಾರು ಅರ್ಜಿ ಸಲ್ಲಿಸಬಹುದು?:*
ಸಣ್ಣ ಆಹಾರ ಉತ್ಪಾದಕರು, ಮನೆಯಲ್ಲಿಯೇ ಆಹಾರ ಉತ್ಪನ್ನಗಳನ್ನು ತಯಾರಿಸುವ ಉದ್ಯಮಿಗಳು, ಸ್ವಸಹಾಯ ಗುಂಪುಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
*ಬಳ್ಳಾರಿ ಜಿಲ್ಲೆಗೆ ವಿಶೇಷ ಅವಕಾಶ:*
ಬಳ್ಳಾರಿ ಜಿಲ್ಲೆಯು ಭತ್ತ, ಮೆಕ್ಕೆಜೋಳ, ಮೆಣಸಿನಕಾಯಿ, ದಾಳಿಂಬೆ ಹಾಗೂ ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ರೈತರು ತಮ್ಮ ಈ ಬೆಳೆಗಳನ್ನು ಕೇವಲ ಕಚ್ಚಾ ರೂಪದಲ್ಲಿ ಮಾರಾಟ ಮಾಡದೆ, ಈ ಯೋಜನೆಯಡಿ ಸಂಸ್ಕರಿಸಿ ಮಾರಾಟ ಮಾಡುವುದರಿಂದ ಹೆಚ್ಚಿನ ಲಾಭ ಗಳಿಸಲು ಸಾಧ್ಯವಿದೆ.
ಆತ್ಮನಿರ್ಭರ ಭಾರತದ ಕನಸನ್ನು ನನಸು ಮಾಡುವಲ್ಲಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಪಿಎಂಎಫ್‌ಎAಇ ಯೋಜನೆ ಮಹತ್ವದ ಪಾತ್ರ ವಹಿಸುತ್ತದೆ. ಜಿಲ್ಲೆಯ ಯುವಕರು ಮತ್ತು ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಆಸಕ್ತರು ಪಿಎಂಎಫ್‌ಎAಇ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ರೈತರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ರೈತ ಕೇಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1800-425-3553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST