Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಅಧಿಕಾರಿಗೆ ಪತ್ರಕರ್ತರ ಸೋಗಿನಲ್ಲಿ ಬ್ಲ್ಯಾಕ್ ಮೇಲ್: ಮೂವರ ಹೆಡೆಮುರಿ ಕಟ್ಟಿದ ಪೊಲೀಸರು

ಬೆಳಗಾವಿ : ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವೀಡಿಯೋ ಮಾಡಿಕೊಂಡು ಸಮಾಜಿಕ ಜಾಲತಾಣ ಸೇರಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಸರಕಾರಿ ಮಹಿಳಾ ಅಧಿಕಾರಿಯ ಮನೆಯ ಕೊಠಡಿಯಲ್ಲಿ ಹಿಡನ್ ಕ್ಯಾಮರಾ ಬಳಸಿ ಬ್ಲ್ಯಾಕ್ ಮೇಲ ಮಾಡಿದ್ದ ಮೂವರು ಪತ್ರಕರ್ತರ ಸೋಗಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಮೀರ್ ನಿಸಾರ ಅಹ್ಮದ್ ಶೇಖ್ (32), ಅಬ್ದುಲ ರಶೀದ ಮಕಾನದಾರ (51), ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ನಕಲಿ ಪತ್ರಕರ್ತರು. ಮಹಿಳಾ ಅಧಿಕಾರಿ ಮನೆಯ ಕೊಠಡಿಯಲ್ಲಿ ಹಿಡನ್  (ರಹಸ್ಯ) ಕ್ಯಾಮರಾ ಇಟ್ಟು ಅವರ ಖಾಸಗಿ ವಿಡಿಯೋಗಳನ್ನು ಮುಂದಿಟ್ಟುಕೊಂಡು ಒಂದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಈ ನಕಲಿ ಪತ್ರಕರ್ತರು, 50 ಲಕ್ಷ ರೂ. ಕೊಡುವಂತೆ ಪೀಡಿಸುತ್ತಿದ್ದರು.

ಮಹಿಳಾ ಅಧಿಕಾರಿ ಮಾಳಮಾರುತಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸಿಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬ್ಲ್ಯಾಕ್ ಮೇಲ್ ಮಾಡಿದ್ದ ನಕಲಿ ಪತ್ರಕರ್ತರ ಸೋಲಿನಲ್ಲಿದ್ದ ನಕಲಿ ಪತ್ರಕರ್ತರ ಹೆಡೆಮುರಿ ಕಟ್ಟಿದ್ದಾರೆ.

ಪ್ರಕರಣ ದಾಖಲು ಮಾಡದಿರಲು ಸಾಕಷ್ಟು ಒತ್ತಡ ಹಾಕಿದ್ದರು. ಲೆಕ್ಕಕ್ಕೆ ತೆಗೆದುಕೊಳ್ಳದ ಮಾಳಮಾರುತಿ ಪೊಲೀಸರು ಸರಕಾರಿ ಮಹಿಳಾ ಅಧಿಕಾರಿಗೆಯೇ ಬ್ಲ್ಯಾಕ್ ಮಾಡಿರುವ ಈ ಖದೀಮರ ಜಾಲ ದೊಡ್ಡದಿರಬಹುದು ಎಂದು ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿ ವಿಚಾರಣೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ