Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ವೃತ್ತದಲ್ಲಿ ಪೊಲೀಸರ ದಾಳಿ: ?೧೨ ಲಕ್ಷ ಮೌಲ್ಯದ ಸ್ವತ್ತು ವಶ, ೭ ಆರೋಪಿಗಳ ಬಂಧನ

 

ಬಳ್ಳಾರಿ, ಏ.೧8:.. ಇತ್ತೀಚೆಗೆ ಕುರುಗೋಡು ವೃತ್ತ ವ್ಯಾಪ್ತಿಯಲ್ಲಿ ಹೆಚ್ಚಳ ಕಂಡಿದ್ದ ಸ್ವತ್ತಿನ ಕಳವು ಪ್ರಕರಣಗಳನ್ನು ಭೇದಿಸಲು ಬಳ್ಳಾರಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮಹತ್ವದ ಸಾಧನೆ ಮಾಡಲಾಗಿದ್ದು, ವಿವಿಧ ಪ್ರಕರಣಗಳಲ್ಲಿ ಕಳುವಾಗಿದ್ದ ಸುಮಾರು ?೧೨ ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡು ಒಟ್ಟು ೭ ಆರೋಪಿಗಳನ್ನು ಬಂಧಿಸಲಾಗಿದೆ.

ಎಸ್.ಎಂ. ಬಾಳನಗೌಡ, ಸಿಪಿಐ ಕುರುಗೋಡು ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀ ನವೀನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹಾಗೂ ತೋರಣಗಲ್ಲು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀ ಪ್ರಸಾದ್ ಗೋಖಲೆ ಅವರ ಮುತುವರ್ಜಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಈ ತಂಡದಲ್ಲಿ ಕುರುಗೋಡು ಠಾಣೆಯ ಪಿ.ಎಸ್.ಐ ಸುಪ್ರೀತ್, ಕರಮ್ಮ, ಕುಡತಿನಿ ಠಾಣೆಯ ಪಿ.ಎಸ್.ಐ ಶಾಂತಮೂರ್ತಿ, ವಾಣಿ ಸೇರಿದಂತೆ ಎ.ಎಸ್.ಐ ಶಕ್ಷಾವಲಿ, ಪೀರಾನಾಯ್ಕ ಹಾಗೂ ಸಿಬ್ಬಂದಿಗಳಾದ ರಾಜಶೇಖರ, ವಿಜಯಕುಮಾರ, ರೇವಣಸಿದ್ದೇಶ್ವರ, ಆಂಜಿನಿ, ಸಾಧಿಕ್, ಮಂಜುನಾಥ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರಮುಖವಾಗಿ ಪತ್ತೆಯಾದ ಪ್ರಕರಣಗಳು:
ಕುರುಗೋಡು ಠಾಣೆ ವ್ಯಾಪ್ತಿಯ ಪ್ರಕರಣದಲ್ಲಿ ?೧.೫೦ ಲಕ್ಷ ಮೌಲ್ಯದ ಕಾಪರ್ ವೈರ್ ವಶಪಡಿಸಿಕೊಂಡು ೩ ಆರೋಪಿಗಳನ್ನು ಬಂಧಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ?೪.೫೦ ಲಕ್ಷ ಮೌಲ್ಯದ ೪ ಎಮ್ಮೆಗಳನ್ನು ಪತ್ತೆಹಚ್ಚಿ ೨ ಮಂದಿಯನ್ನು ಬಂಧಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ?೩.೮೦ ಲಕ್ಷ ಮೌಲ್ಯದ ೪ ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಕುಡತಿನಿ ಠಾಣೆ ಪ್ರಕರಣದಲ್ಲಿ ?೨.೨೦ ಲಕ್ಷ ಮೌಲ್ಯದ ಲಾರಿ ಟೈರ್‌ಗಳನ್ನು ವಶಪಡಿಸಿಕೊಂಡು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಒಟ್ಟು ನಾಲ್ಕು ಸ್ವತ್ತಿನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಆರೋಪಿಗಳ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪನ್ನೇಕರ್ ಅವರು ಶ್ಲಾಘಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*