Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ವಿಶೇಷ ಕಾರ್ಯಾಚರಣೆ : 4 ಮಂದಿಯ ವಿರುದ್ಧ ಎನ್‌ಡಿಪಿಎಸ್  ಪ್ರಕರಣ ದಾಖಲು 

ಬಳ್ಳಾರಿ, ಜು. 14 : ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಕುಡುಕರ ವಿರುದ್ಧ  ಜಿಲ್ಲಾ ಪೊಲೀಸ್ ಇಲಾಖೆ ನಿನ್ನೆ ಸಂಜೆ ನಗರದಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಾಲ್ವರು ಮಾದಕ ವಸ್ತು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಅವರ ವಿರುದ್ಧ ಏನ್ ಡಿ ಪಿ ಎಸ್ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ ಪಿ ಸುಮನ್ ಡಿಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ನಿನ್ನೆ ಸಂಜೆ 7 ಗಂಟೆಯಿಂದ 8:00 ಸಮಯದೊಳಗೆ ನಗರದ ಸುತ್ತಮುತ್ತಲಿನ ಹೊಸ ಬಡಾವಣೆ ಫುಟ್ಪಾತ್ ಪಾರ್ಕ್ ಸೇರಿದಂತೆ ಜನನಿಘಡ ಪ್ರದೇಶದಲ್ಲಿ ಓಪನ್ ಏರಿಯಾಗಳಲ್ಲಿ ಮಧ್ಯಪಾನ ಮಾಡುತ್ತಿದ್ದವರ ಮೇಲೆ 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಐಪಿಎಸ್ ಅವರ ನಿರ್ದೇಶನದಂತೆ ಜು. 10 ಮತ್ತು 11ರಂದು ಎರಡು ದಿನ ಸಾರ್ವಜನಿಕರಿಂದ ಬಂದ ಮಾಹಿತಿಯ ಆಧಾರದ ಮೇಲೆ ರಸ್ತೆ ಬದಿ, ಉದ್ಯಾನವನಗಳು, ಶಾಲಾ ಮೈದಾನಗಳು, ನಗರದ ಹೊರವಲಯದ ಖಾಸಗಿ ಲೇಔಟ್‌ಗಳು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಒಟ್ಟು 174 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ 111 ಮಂದಿಯನ್ನು ಮಾದಕ ವಸ್ತು ಸೇವನೆ ಶಂಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಲ್ಲಿ ನಾಲ್ವರು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದ್ದು, ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಳಿದ 170 ಮಂದಿಯ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆಯಡಿ ಲಘು ಪ್ರಕರಣಗಳನ್ನು ದಾಖಲಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ಮದ್ಯಪಾನ ಅಥವಾ ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ನಗರದ ಮಾದಕ ವಸ್ತು ಚಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ