Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಚೆ ಇಲಾಖೆ: ಬುಕ್ಕಿಂಗ್ ಸೇವಾ ಅವಧಿ ವಿಸ್ತರಣೆ




ಬಳ್ಳಾರಿ,ಫೆ.05-ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ವಿಸ್ತರಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಆರ್.ಅಶೋಕ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯ ಒದಗಿಸಲಾಗುತ್ತಿದೆ.
ಈ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವ ದಿನಗಳಲ್ಲಿ ಇಲಾಖಾ ಅಂಚೆ ಕಚೇರಿಗಳ ನಿಗದಿತ ಕಾರ್ಯಾವಧಿ ಮುಕ್ತಾಯಕ್ಕೆ 30 ನಿಮಿಷಗಳವರೆಗೆ ಮುಂಚಿತವಾಗಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಹಾಗೂ ಅಂತರಾಷ್ಟಿçÃಯ ಸ್ಪೀಡ್ ಪೋಸ್ಟ್, ಪಾರ್ಸೆಲ್‌ಗಳನ್ನು ಬುಕ್ ಮಾಡಬಹುದಾಗಿದೆ.
ಇದರಿಂದ ಕಚೇರಿ ಸಮಯದ ಅಂತ್ಯದಲ್ಲಿ ಅಂಚೆ ಕಚೇರಿಗೆ ಬರುವ ಗ್ರಾಹಕರಿಗೂ ತಮ್ಮ ಅಂಚೆ ವಸ್ತುಗಳನ್ನು ಸುಲಭವಾಗಿ ಬುಕ್ ಮಾಡುವ ಅವಕಾಶ ದೊರೆಯುತ್ತದೆ. ಸೋಮವಾರದಿಂದ ಶುಕ್ರವಾರ ದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
*ಮನೆಯಲ್ಲಿಯೇ ಬುಕ್ಕಿಂಗ್ ಸೌಲಭ್ಯ:*
ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ (Customer Self Service Portal: https://app.indiapost.gov.in/customer-selfservice/login) ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾö್ಯಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಅನ್‌ಲೈನ್ ನಲ್ಲಿಯೇ ಪಡೆಯಬಹುದು.
*ಡಾಕ್ ಸೇವಾ ಆಪ್:*
ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಪಡೆಯುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ ‘ಡಾಕ್ ಸೇವಾ ಆಪ್’ ಅನ್ನು ಬಿಡುಗಡೆ ಮಾಡಿದ್ದು, ಈ ಆಪ್ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾö್ಯಕಿಂಗ್, ದೂರು ನೋಂದಣಿ, ಸೇವಾ ಮಾಹಿತಿ ಸೇರಿದಂತೆ ವಿವಿಧ ಗ್ರಾಹಕ ಸೇವೆಗಳು ಮೊಬೈಲ್‌ನಲ್ಲಿಯೇ ಪರಿಶೀಲಿಸಿಕೊಳ್ಳಲು ಲಭ್ಯವಿರುತ್ತದೆ. ಆಪ್ ಡೌನ್‌ಲೋಡ್ ಮಾಡಲು ಇಂಡಿಯಾ ಪೋಸ್ಟ್ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
ಸಾರ್ವðಜನಿಕರು ಮೇಲ್ಕಂಡ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಆರ್.ಅಶೋಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ