LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪ್ರಭಾಸ್‌ ಚಿತ್ರ ದಿ ರಾಜಾಸಾಬ್  ಟೀಸರ್‌ ಬಿಡುಗಡೆ 



     ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ, ಮಾರುತಿ ನಿರ್ದೇಶನದ 'ದಿ ರಾಜಾಸಾಬ್‌' ಸಿನಿಮಾ, ಈಗಾಗಲೇ ದೊಡ್ಡ ಮಟ್ಟದ ಹೈಪ್‌ ಕ್ರಿಯೇಟ್‌ ಮಾಡಿದೆ. ಮೇಕಿಂಗ್‌ ಮೂಲಕ ಗಮನ ಸೆಳೆದ ಈ ಸಿನಿಮಾದ ಮೊದಲ ಟೀಸರ್‌ ಬಿಡುಗಡೆಯಾಗಿದೆ.

     ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಟಿ ಜಿ ವಿಶ್ವ ಪ್ರಸಾದ್ ಈ ಚಿತ್ರದ ನಿರ್ಮಾಪಕರು.

     'ದಿ ರಾಜಾ ಸಾಬ್' ಟೀಸರ್ ನಲ್ಲಿ ಪ್ರಭಾಸ್ ಅವರ ವಿಂಟೇಜ್ ಲುಕ್ ಖಡಕ್‌ ಆಗಿದೆ. ಮೂವರು ನಾಯಕಿಯರು, ಪ್ರಭಾಸ್ ಅವರ ಎಂಟ್ರಿ, ನಗಿಸುವ ಕಾಮಿಡಿ ಡೈಲಾಗ್‌ಗಳು ರೊಮ್ಯಾಂಟಿಕ್ ಟ್ರ್ಯಾಕ್ ಸೊಗಸಾಗಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಬಾಲಿವುಡ್‌ ನಟ ಸಂಜಯ್ ದತ್ ಅವರ ವಿಚಿತ್ರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ.

     ಟೀಸರ್‌ನಲ್ಲಿ, ಪ್ರಭಾಸ್ ಎರಡು ಲುಕ್‌ನಲ್ಲಿ ಕಂಡಿದ್ದಾರೆ. ಒಂದು ಪಕ್ಕಾ ಲವರ್‌ಬಾಯ್‌ ಲುಕ್‌ ಮತ್ತು ಮಾಸ್‌ ಆಕ್ಷನ್‌ ಅವತಾರದಲ್ಲಿ ಎದುರಾದರೆ, ಮತ್ತೊಂದರಲ್ಲಿ ಗಾಢವಾದ, ಅತೀಂದ್ರಿಯ ಶಕ್ತಿಯನ್ನು ಆವಾಹಿಸಿಕೊಂಡಂತೆ ಕಂಡಿದ್ದಾರೆ. ಪ್ರಭಾಸ್‌ ಜತೆಗೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ಮತ್ತು ರಿದ್ಧಿ ಕುಮಾರ್ ಈ ಚಿತ್ರದ ತ್ರಿವಳಿ ನಾಯಕಿಯರು. ಪ್ರತಿ ಪಾತ್ರವೂ ಶಾಪಗ್ರಸ್ತ ಮಹಲಿನ ಕಥೆಗೆ ನಿಗೂಢತೆಯ ಪದರಗಳನ್ನು ಸೇರಿಸುತ್ತಾ ಹೋಗುತ್ತಾರೆ.

     "ದಿ ರಾಜಾಸಾಬ್‌' ಚಿತ್ರದ ಮೂಲಕ ನಾವು ಏನನ್ನಾದರೂ ದೊಡ್ಡದನ್ನೇ ನಿರ್ಮಿಸಲು ಬಯಸಿದ್ದೇವೆ. ಈ ವರೆಗೂ ನೋಡದ ಸೆಟ್‌ಗಳು ಈ ಸಿನಿಮಾದಲ್ಲಿರಲಿದೆ. ನಮ್ಮ ಈ ಸಿನಿಮಾ ಇದೇ ವರ್ಷದ ಡಿಸೆಂಬರ್ 5ರಂದು ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ" ಎಂದಿದ್ದಾರೆ ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ಹಂಚಿಕೊಂಡಿದ್ದಾರೆ.

     'ರಾಜಾಸಾಬ್' ಒಂದು ಪ್ರಕಾರದ ಪ್ರಯಾಣ - ಇದು ಭಯಾನಕ ಮತ್ತು ಫ್ಯಾಂಟಸಿ, ನೈಜ ಮತ್ತು ಅತಿವಾಸ್ತವಿಕತೆಯ ನಡುವೆ ಹರಿಯುತ್ತದೆ. ಥಮನ್ ಅವರ ರೋಮಾಂಚಕಾರಿ ಸಂಗೀತ ಇಡೀ ಸಿನಿಮಾದ ಹೈಲೈಟ್‌ ಎಂದಿದ್ದಾರೆ ನಿರ್ದೇಶಕ ಮಾರುತಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್