LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕುಟುಂಬದ ಮಾನ ಹರಾಜಾಗುತ್ತಿದೆ ಎಂದು ಪ್ರಜ್ವಲ್ ಆಕ್ಷೇಪ

ಬೆಂಗಳೂರು : ಪೆನ್​ಡ್ರೈವ್​ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಎಸ್​ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪ್ರತಿ ದೂರು ನೀಡುವುದಕ್ಕೆ ಸಜ್ಜಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ತಮ್ಮ ತೇಜೋವಧೆ ಮಾಡಲಾಗುತ್ತಿದೆ ಎಂದು ಅವರು ಪ್ರತಿದೂರು ದಾಖಲಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಪೆನ್​ಡ್ರೈವ್​ ವಿಡಿಯೊ ಬಹಿರಂಗಗೊಂಡ ಬಳಿಕ ಅದನ್ನು ನನ್ನ ಹೆಸರಿಗೆ ತಳುಕು ಹಾಕಲಾಗುತ್ತಿದೆ. ಇದರಿಂದ ನನ್ನ ಕುಟುಂಬದ ಮಾನ ಹರಾಜಾಗುತ್ತಿದೆ ಎಂದು ಪ್ರಜ್ವಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.



ನನ್ನ ವಿರುದ್ಧ ಮಾನಹಾನಿಕರವಾದಂತಹ ಆರೋಪಗಳನ್ನ ಮಾಡಲಾಗುತ್ತಿದೆ. ತನ್ನ ಕುಟುಂಬ ಹಾಗು ನನ್ನ ಮೇಲೆ ಕೀಳು ಮಟ್ಟದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ನನ್ನ ಭಾವಚಿತ್ರವನ್ನು ಮಾರ್ಫ್ ಮಾಡಿ ಹಂಚಿ ನನ್ನ ರಾಜಕೀಯ ಭವಿಷ್ಯಕ್ಕೆ ಕುಂದುಂಟು ಮಾಡಿದ್ದಾರೆ ಎಂದು ಪ್ರಜ್ವಲ್​ ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.



ಇಡೀ ಸಮಾಜದ ಮುಂದೆ ತನ್ನ ಹೆಸರನ್ನ ಬಳಸಿ ತೇಜೋವಧೆ ಮಾಡಲಾಗುತ್ತಿದೆ. ನನ್ನನ್ನು ಅತ್ಯಾಚಾರಿ ಎಂದು ಬಿಂಬಿಸಿ ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಾರೆಂದು ದೂರು ನೀಡುವ ಸಾಧ್ಯತೆಯಿದೆ. ಈ ಕುರಿತು ಅವರು ವಕೀಲರ ಜತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್