LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಮಾದರಿ ಮತ್ತೊಂದು ಘಟನೆ

ಉಡುಪಿ, ಜೂನ್.02: ಹಾಸನ ಸಂಸದ ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ.

ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್