Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,25: ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್.ಡಿ. ದೇವೇಗೌಡ, ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಟೀಕಿಸಿದರು.

ಲೈಂಗಿಕ ಹಗರಣದ ಆರೋಪಿಯಾಗಿರುವ ಪ್ರಜ್ವಲ್ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗುವಂತೆ ದೇವೇಗೌಡ ಅವರು ತಮ್ಮಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಪತ್ರ ಬರೆದಿದ್ದಾರೆ.

ಈ ಪತ್ರ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನನ್ನ ಪ್ರಕಾರ ಹಾಸನದ ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿರುವುದೇ ದೇವೇಗೌಡರು. ಸಾರ್ವಜನಿಕವಾಗಿ ಅನುಕಂಪಗಳಿಸಲು ಪತ್ರ ಬರೆದಿದ್ದಾರೆ. ವಿದೇಶಕ್ಕೆ ಕಳುಹಿಸಿರುವುದು ಅವರೇ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಣವರ ಅಣ್ಣನ ಮಗ ಅತ್ಯಾಚಾರ, ಲೈಂಗಿಕ ದೌರ್ಜನ್ಯವನ್ನೆಲ್ಲಾ ಮಾಡಿದ್ದಾನೆ. ಯಾರು ಅತ್ಯಾಚಾರ ಮಾಡಿದ್ದಾರೆಯೋ ಅದು ದೊಡ್ಡ ಅಪರಾಧ. ಈ ಗಂಭೀರ ವಿಚಾರದಿಂದ ಗಮನವನ್ನು ಬೇರೆಡೆ ಸೆಳೆಯಲು ಕುಮಾರಸ್ವಾಮಿ ಏನೇನೋ ಹೇಳುತ್ತಿದ್ದಾರೆ. ಶಿವಕುಮಾರ್‌ ಮತ್ತಿತರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*