Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲಸೆ ಹೋದ, ಇನ್ನುಳಿದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ



ಬಳ್ಳಾರಿ,ಮೇ 28: ಜಿಲ್ಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಆಯಾ ನಗರ, ತಾಲ್ಲೂಕು ಮತ್ತು ಗ್ರಾಮಗಳಿಂದ ಕೆಲಸದ ನಿಮಿತ್ತ ಬೇರೆಡೆ ವಲಸೆ ಹೋಗಿರುವ ಪರಿಶಿಷ್ಟ ಕುಟುಂಬಗಳ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.


ಮಂಗಳವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 ಕುರಿತಂತೆ ಸಮುದಾಯದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


2025 ರಂತೆ ಪರಿಶಿಷ್ಟ ಜಾತಿ ಅಂದಾಜು ವಿವರದಂತೆ ಜಿಲ್ಲೆಯಲ್ಲಿ 61,037 ಪರಿಶಿಷ್ಟ ಜಾತಿಗಳ ಕುಟುಂಬಗಳಲ್ಲಿ ಒಟ್ಟು 3,04,468 ಪರಿಶಿಷ್ಟ ಜಾತಿ ಜನಸಂಖ್ಯೆ ಇದೆ. ಸಮೀಕ್ಷೆಯಲ್ಲಿ ಈಗಾಗಲೇ 57385 ಕುಟುಂಬಗಳು ಪೂರ್ಣಗೊಂಡಿವೆ. ಅದರಲ್ಲಿ ಪರಿಶಿಷ್ಟ ಜಾತಿಯ ಒಟ್ಟು 2,56,753 ಜನಸಂಖ್ಯೆ ಸರ್ವೇ ಮಾಡಲಾಗಿದೆ. ಶೇ.84 ರಷ್ಟು ಪ್ರಗತಿಯಾಗಿದ್ದು, ಇನ್ನುಳಿದ ವಲಸೆ ಹೋಗಿರುವ ಕುಟುಂಬಗಳ ಮಾಹಿತಿ ಅಥವಾ ಇನ್ನು ಸಮೀಕ್ಷೆಯಲ್ಲಿ ಭಾಗಿಯಾಗದವರ ಆಯಾ ಸಮುದಾಯದ ಮುಖಂಡರುಗಳು ಮಾಹಿತಿ ನೀಡಬೇಕು ಎಂದು ತಿಳಿಸಿದರು.


ಈಗಾಗಲೇ ಜಿಲ್ಲೆಯಲ್ಲಿ ಇತರೆ ಕೆಲಸಕ್ಕಾಗಿ ವಲಸೆ ಹೋದರವರನ್ನು ಸಮುದಾಯದ ಮುಖಂಡರು ಸಂಪರ್ಕಿಸಿ ಅವರಿಗೆ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ತಪ್ಪದೇ ಭಾಗವಹಿಸುವಂತೆ ತಿಳಿಸಬೇಕು. ಇದು ರಾಜ್ಯ ಸರ್ಕಾರವು ನೀಡಿರುವ ಉತ್ತಮ ಅವಕಾಶವಾಗಿದ್ದು, ತಪ್ಪದೇ ಸಮೀಕ್ಷೆಯಲ್ಲಿ ಒಳಪಡುವಂತೆ ನಿರ್ದೇಶನ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.


ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಮಾತನಾಡಿ, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಮನೆ-ಮನೆ ಭೇಟಿಯು ಮೇ 29 ರವರೆಗೆ ನಡೆಯಲಿದ್ದು, ಎರಡು ದಿನಗಳ ಕಾಲಾವಕಾಶವಿದ್ದು, ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ತಮ್ಮ ನೆರೆಹೊರೆಯವರ ಕುಟುಂಬಗಳು ವಲಸೆ ಹೋಗಿದ್ದಲ್ಲಿ ಅಂತಹ ಕುಟುಂಬಗಳ ಮಾಹಿತಿಯನ್ನು ಸಮೀಕ್ಷಾದಾರರಿಗೆ ಗುರುತಿಸಿ ನೀಡಬೇಕು. ಇದಕ್ಕೆ ಸಮುದಾಯದ ಮುಖಂಡರುಗಳು ಸಹಕರಿಸಬೇಕು ಎಂದು ಹೇಳಿದರು.


ಅದೇರೀತಿಯಾಗಿ ಮೇ 30 ರಿಂದ ಜೂನ್ 01 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರಗಳು ನಡೆಯಲಿದ್ದು, ಅಲ್ಲಿ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಹೊರಗುಳಿದ ಪರಿಶಿಷ್ಟ ಜಾತಿ ಕುಟುಂಬಗಳು ಸಮೀಕ್ಷೆಯಲ್ಲಿ ಒಳಪಡಿಸಲಾಗುವುದು. ಹಾಗಾಗಿ ಹೊರಗುಳಿದ ಪರಿಶಿಷ್ಟ ಜಾತಿಯ ಕುಟುಂಬಗಳು ತಮ್ಮ-ತಮ್ಮ ವ್ಯಾಪ್ತಿಯ ಬೂತ್ ಗಳಲ್ಲಿ ಅಂದು ನಡೆಯುವ ಶಿಬಿರಗಳಲ್ಲಿ ತಪ್ಪದೇ ಹೋಗಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕು. ಒಂದು ವೇಳೆ ಅಲ್ಲಿಯೂ ಭಾಗವಹಿಸದೇ ಇದ್ದಲ್ಲಿ ಅನ್‌ಲೈನ್ ಮೂಲಕ ಸ್ವಯಂ ಘೋಷಣೆ ಪ್ರಕ್ರಿಯೆಯು ಈಗಾಗಲೇ ನಡೆಯುತ್ತಲಿದೆ. ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಮಾಹಿತಿ ನೀಡಬಹುದು ಎಂದರು. ಮನೆ-ಮನೆ ಭೇಟಿ ಸಮೀಕ್ಷಾ ಕಾರ್ಯದಲ್ಲಿ ಇನ್ನುಳಿದ ಎರಡು ದಿನಗಳಲ್ಲಿ ಶಿಕ್ಷಕರು ಇನ್ನಷ್ಟು ಹೆಚ್ಚಿನ ಶ್ರಮವಹಿಸಿ ಸಮೀಕ್ಷಾ ಕಾರ್ಯ ಇನ್ನಷ್ಟು ಪೂರ್ಣಗೊಳಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಈ ಕುರಿತು ಬಿಇಒ ಗಳು ಶಿಕ್ಷಕರಿಗೆ ನಿರ್ದೇಶನ ನೀಡಲು ಸೂಚಿಸಿದರು.


ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲು ತಾಂತ್ರಿಕ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು. ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಸಭೆಯಲ್ಲಿ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ