LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪ್ರಥಮ್ ಚಿತ್ರ ಫಸ್ಟ್ ನೈಟ್ ವಿತ್ ದೆವ್ವ  ರೊಮ್ಯಾಂಟಿಕ್ ಹಾಡು ಬಿಡುಗಡೆ 


     ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ 'ಫಸ್ಟ್ ನೈಟ್ ವಿತ್ ದೆವ್ವ' ಚಿತ್ರದ 'ತುಂಟ ಮನದ ಮಾಯೆ ನೀನು' ಎಂಬ ರೊಮ್ಯಾಂಟಿಕ್ ಹಾಡು ಇತ್ತೀಚೆಗೆ ಎ2 ಮ್ಯೂಸಿಕ್  ಮೂಲಕ ಬಿಡುಗಡೆಯಾಗಿದೆ.

        ಕನ್ನಡದ ಮೊದಲ ಪತ್ರಿಕಾ ಪ್ರಚಾರಕರ್ತ ದಿ. ಡಿ.ವಿ.ಸುಧೀಂದ್ರ ಸ್ಥಾಪಿಸಿದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಹಾಗೂ ಸುನೀಲ್ ಸುಧೀಂದ್ರ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದವರು  ಮಾತನಾಡಿದರು.

     "ಮನೋರಂಜನೆಯೇ ಪ್ರಧಾನವಾಗಿರುವ ಜೊತೆಗೆ ಹಾರಾರ್ ಕಥಾಹಂದರವನ್ನೂ ಹೊಂದಿರುವ 'ಫಸ್ಟ್ ನೈಟ್ ವಿತ್ ದೆವ್ವ' ಚಿತ್ರದ ಈ ರೊಮ್ಯಾಂಟಿಕ್ ಹಾಡನ್ನು ಅದ್ವಿಕ್ ವರ್ಮ ಅವರ ಸಂಗೀತ ನಿರ್ದೇಶನದಲ್ಲಿ ರಿಚ್ಚಿ ತುಂಬಾ ಸೊಗಸಾಗಿ ಹಾಡಿದ್ದಾರೆ. ಇನ್ನೂ ನಮ್ಮ ಚಿತ್ರ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ  ಪ್ರಮಾಣಪತ್ರ ನೀಡಿದೆ. ನಿಖಿತಾಸ್ವಾಮಿ, ಸುಶ್ಮಿತಾ, ಹರೀಶ್ ರಾಜ್, ಶ್ರೀನಿವಾಸಮೂರ್ತಿ, ರಮೇಶ್ ಭಟ್, ತುಕಾಲಿ ಸಂತೋಷ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾನೇ ಈ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದೇನೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ" ಎಂದರು ನಾಯಕ ಪ್ರಥಮ್.

     "ಎಲ್ಲರ ಸಹಕಾರದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ.‌ ನಾನು ಛಾಯಾಗ್ರಾಹಕನಾಗಿ ಬಹಳ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಈ ಚಿತ್ರಕ್ಕೂ ನಾನೇ ಛಾಯಾಗ್ರಹಣದ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. 'ಫಸ್ಟ್ ನೈಟ್ ವಿತ್ ದೆವ್ವ' ನನ್ನ ನಿರ್ದೇಶನದ ಐದನೇ ಚಿತ್ರ ಹಾಗೂ ಛಾಯಾಗ್ರಹಣದ ಐವತ್ತೆರಡನೇ ಚಿತ್ರ.  ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ. ಪ್ರೋತ್ಸಾಹ ನೀಡಿ" ಎಂದು ನಿರ್ದೇಶಕ ಪಿ.ವಿ.ಆರ್ ಸ್ವಾಮಿ ಕೋರಿದರು.

     "ನನ್ನ ಪಾತ್ರ ಕೂಡ ಚೆನ್ನಾಗಿದೆ. ನಾಯಕನ ಜೊತೆಗ ಸಾಗುವ ಪಾತ್ರ‌" ಎಂದು ತುಕಾಲಿ ಸಂತೋಷ್ ಹೇಳಿದರು.

ಚಿತ್ರದಲ್ಲಿ ಅಭಿನಯಿಸಿರುವ ನಿಖಿತಾ ಸ್ವಾಮಿ, ಸುಶ್ಮಿತಾ,  ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಗಾಯಕ ರಿಚ್ಚಿ, ನೃತ್ಯ ನಿರ್ದೇಶಕ ಸೈ ರಮೇಶ್, ವಿ.ಎಫ್.ಎಕ್ಸ್ ದಯಾನಂದ್ ಹಾಗೂ ಸಂಕಲನ ಕಾರ್ಯ ಮಾಡುವುದರೊಂದಿಗೆ ಸಂಭಾಷಣೆಯನ್ನು ಬರೆದಿರುವ ನಾಗೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್