ಅಥಣಿ : ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬರುವ ದಿ. 26 ರಂದು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆದಿ ಬಣಜಿಗ ಯುವ ವೇದಿಕೆಯ ಅಧ್ಯಕ್ಷ ರಾಜು ಆಲಬಾಳ ಹೇಳಿದರು.
ಅವರು ಸೋಮವಾರ ಪಟ್ಟಣದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಆದಿ ಬಣಜಿಗ ಸಮಾಜದ ಸಂಘಟನೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುತ್ತಿದೆ. ಬರುವ ದಿನಾಂಕ 26ರಂದು ಮುಂಜಾನೆ 9:00 ಗಂಟೆಗೆ ಪಟ್ಟಣದ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಶೆಟ್ಟರ ಮಠದ ಮರುಳಸಿದ್ದ ಸ್ವಾಮೀಜಿ ಸಮಾರಂಭದ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಐಎಎಸ್ ಅಧಿಕಾರಿ ಸುನೀಲ ಟಾಕಳೆ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿದ್ದು ಗದ್ಯಾಳ, ಸುರೇಶ ಬಳ್ಳೋಳ್ಳಿ, ಸ್ವಾಗತ ತೋರಿ,
ಚನ್ನಬಸಪ್ಪ ತೋರಿ, ಸತೀಶ ಪಾಟೀಲ, ರಮೇಶ ಮುಚ್ಚಂಡಿ, ಅಶೋಕ ಮಾರಾಪೂರ, ಬಸವರಾಜ ಮಾದಗುಡಿ,
ಸುರೇಶ ಆಲಬಾಳ, ಚನ್ನಬಸು ಬಳ್ಳೋಳ್ಳಿ
ರಾಜು ಮರಡಿ, ಕುಮಾರ ಬಿಳ್ಳೂರ, ಪರಸುರಾಮ ಬಿರಾದಾರ, ಹಣಮಂತ ವನಜೋಳಿ ಉಪಸ್ಥಿತರಿದ್ದರು.
