Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ದೇವರಾಜು ಅರಸುರವರ 109ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ

ಬಳ್ಳಾರಿ,ಆ.08: ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಗುರುವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ  ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಗಸ್ಟ್ 20 ರಂದು ಬೆಳಿಗ್ಗೆ 10.30 ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ , ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ  ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮತ್ತು ಪಿಹೆಚ್ ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಅದೇರೀತಿಯಾಗಿ ಜಿಲ್ಲೆಯಲ್ಲಿ ಸಾವಯವ ಕೃಷಿ ಪದ್ಧತಿಯಲ್ಲಿ ಯಶಸ್ಸು ಗಳಿಸಿದ ಹಿಂದುಳಿದ ವರ್ಗಗಳ ರೈತರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ತಿಳಿಸಿದ ಅವರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ಡಾ.ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ಆಯೋಜನೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ