LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ



ಬಳ್ಳಾರಿ,ಅ.24: ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ಅತ್ಯಂತ ಸಡಗರ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಜಿಲ್ಲಾ ಕೇಂದ್ರದಲ್ಲಿ ನವೆಂಬರ್ 01 ರಂದು 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಂಬAಧವಾಗಿ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವ ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ಉಳಿಯದೆ ಜನೋತ್ಸವವಾಗಿ ಹೊರಹೊಮ್ಮಬೇಕು. ಕನ್ನಡವನ್ನು ಉಳಿಸಿ ಬೆಳೆಸಲು ದಿನನಿತ್ಯದ ಆಡಳಿತ ಮತ್ತು ಸಾರ್ವಜನಿಕ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು.
ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಷ್ಟçಧ್ವಜಾರೋಹಣ ನೆರವೇರಲಿದ್ದು, ವಂದೇ ಮಾತರಂ, ನಾಡಗೀತೆ ಹಾಗೂ ರಾಷ್ಟçಗೀತೆ ಗಾಯನ ನಡೆಯಲಿದೆ.  ಬಳಿಕ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಜ್ಯೋತ್ಸವದ ಸಂದೇಶ ಇರಲಿದೆ ಎಂದು ಹೇಳಿದರು.
ನವೆಂಬರ್ 1 ರಂದು ನಗರದ ಪ್ರಮುಖ ರಸ್ತೆಗಳಲ್ಲಿ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾತಂಡಗಳನ್ನೊಳಗೊAಡ ಭವ್ಯ ಮೆರವಣಿಗೆ ಆಯೋಜಿಸಬೇಕು. ಸ್ಥಳೀಯ ಪ್ರತಿಭೆಗಳಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ ಕನ್ನಡ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಕುಡಿಯುವ ನೀರು, ಆಸನ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲು ಸಂಬAಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ತೆರಳಬಾರದು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಿದರು.
*ಸ್ತಬ್ಧಚಿತ್ರಗಳೊಂದಿಗೆ ಮೆರವಣಿಗೆ:*
ಕಾರ್ಯಕ್ರಮದ ನಂತರ ಭುವನೇಶ್ವರಿ ದೇವಿ ಭಾವಚಿತ್ರ ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ, ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ, ಅರಣ್ಯ, ಸಾರಿಗೆ, ಮಹಾನಗರ ಪಾಲಿಕೆ, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಭಾಗವಹಿಸಲಿವೆ.  ಸ್ತಬ್ಧಚಿತ್ರಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ, ವಿವಿಧ ಇಲಾಖೆಗಳು ಕೇವಲ ಕಾಟಾಚಾರಕ್ಕೆ ಮಾಡದೆ ಗುಣಮಟ್ಟದ ಆಯ್ದ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಲು ಸೂಚಿಸಲಾಯಿತು. ಅಲ್ಲದೆ, ಸ್ತಬ್ಧಚಿತ್ರಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು. ಮೆರವಣಿಗೆ ಆರಂಭವಾದ ನಂತರ ಅಧಿಕಾರಿಗಳು ಅರ್ಧದಲ್ಲೇ ತೆರಳದೆ, ಕಡ್ಡಾಯವಾಗಿ ಮೆರವಣಿಗೆಯ ಜೊತೆಗಿರಬೇಕು ಎಂದು ಎಚ್ಚರಿಕೆ ನೀಡಿದರು.
ಆಯಾ ಇಲಾಖೆಯ ಮುಖ್ಯಸ್ಥರು ತಮ್ಮ ಇಲಾಖೆಯ ಸಿಬ್ಬಂದಿಯ ಹಾಜರಾತಿಯನ್ನು ಪಡೆದು, ದೃಢೀಕರಿಸಿ ಸಲ್ಲಿಸಬೇಕು. ಶಾಲಾ-ಕಾಲೇಜುಗಳ ವತಿಯಿಂದ ಹಾಜರಾತಿ ಮೇಲ್ವಿಚಾರಣೆಗೆ ಡಿಡಿಪಿಐ ಹಾಗೂ ಬಿಇಒ ನೇತೃತ್ವದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದರು.
*ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯ ಆಚರಣೆ:*
ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ನೋಡಿಕೊಳ್ಳಲು ಡಿಡಿಪಿಯು ಹಾಗೂ ಡಿಡಿಪಿಐ ಜಂಟಿಯಾಗಿ ಸಭೆ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮಟ್ಟದಲ್ಲಿ ಕೇವಲ ಒಂದೇ ವಿಷಯಕ್ಕೆ ಸೀಮಿತವಾಗದೆ, ಕನ್ನಡ ಭಾಷೆಯ ಶ್ರೀಮಂತಿಕೆ, ಭಾಷಾ ಸ್ವೀಕರಣೆ ಹಾಗೂ ಏಕೀಕರಣ ಹೋರಾಟಗಾರರ ಪಾತ್ರಗಳ ಕುರಿತು ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಬೇಕು. ನಗರದ ಎಲ್ಲಾ ಪ್ರಮುಖ ವೃತ್ತಗಳು ಹಾಗೂ ಐತಿಹಾಸಿಕ ಕೋಟೆಯನ್ನು ಮಹಾನಗರ ಪಾಲಿಕೆ ವತಿಯಿಂದ ದೀಪಗಳಿಂದ ಸಿಂಗರಿಸುವAತೆ ತಿಳಿಸಿದರು.
*ಸಾಧಕರ ಸನ್ಮಾನ:*
ವಿವಿಧ ಕ್ಷೇತ್ರಗಳಾದ ಪತ್ರಿಕೋದ್ಯಮ, ಸಾಹಿತ್ಯ, ಹೋರಾಟಗಾರರು ಹಾಗೂ ಕನ್ನಡ ಮಾಧ್ಯಮದಲ್ಲೇ ಓದಿ ಯುಪಿಎಸ್‌ಸಿ ಪಾಸಾದಂತಹ ಅರ್ಹ ಪ್ರತಿಭೆಗಳನ್ನು ಗುರುತಿಸಿ, ಪಾರದರ್ಶಕವಾಗಿ ಸಮಿತಿ ಮೂಲಕ ಆಯ್ಕೆ ಮಾಡಿ ಸನ್ಮಾನಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕನ್ನಡ ಪರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಕಿತ್ತೂರು ಉತ್ಸವ ನಿಮಿತ್ತ ವೈಭವದ 'ಪಾರಂಪರಿಕ ನಡಿಗೆ'. ಸಂಸ್ಕೃತಿ, ಇತಿಹಾಸದ ರಕ್ಷಣೆ ಎಲ್ಲರ ಹೊಣೆ: ಸಾಹಿತಿ ಮಂಜುನಾಥ ಕಳಸಣ್ಣವರಹಿಂದೂ ಸಮಾಜದ ಸಂಘಟನೆಯೇ ದೇಶದ ಶಕ್ತಿಗೆ ಆಧಾರ: ನರೇಂದ್ರಜೀಕಬ್ಬಡಿ ಪುರುಷರ ಪಂದ್ಯಾವಳಿ ಸವದತ್ತಿ  ತಂಡಕ್ಕೆ ಜಯ.ವೀರರಾಣಿ ಚೆನ್ನಮ್ಮಳ ಧೈರ್ಯ, ಸಾಹಸ, ದೇಶಪ್ರೇಮ ಯುವಜನರಿಗೆ ಪ್ರೇರಣೆ: ತಹಸೀಲ್ದಾರ್ ಸಿದರಾಯ ಬೋಸಗಿ ಅಭಿಮತಬಸವರಾಜ ಶಿವಲಿಂಗಪ್ಪ ಯಾದವಾಡ ನಿಧನಜನರಲ್ಲಿ ದೇಶಾಭಿಮಾನ ಬೆಳಿಸಿದ ವೀರ ರಾಣಿ ಚೆನ್ನಮ್ಮ - ನಿರಾಣಿ    ಕಿತ್ತೂರು ಚನ್ನಮ್ಮಾಜಿ ಆದರ್ಶ, ಹೋರಾಟ ಜೀವನದಲ್ಲಿ ಬಳಸಿಕೊಳ್ಳಿ : ಬಾಬಾಸಾಹೇಬ ಪಾಟೀಲ.  ಸಿಕಂದರ ಬಾದಹ ಅರಬ ನಿಧನರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಲಚ್ಯಾಣ ಸರಕಾರಿ ಶಾಲೆಯ ಬಾಲಕಿಯರಿಗೆ ತೃತೀಯ ಸ್ಥಾನ