LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಶುರು

ನವದೆಹಲಿ: ಈ ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿನ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ. ಭದ್ರತಾ ಸಿದ್ಧತೆಗಳ ಕುರಿತು ಸಭೆ ನಡೆಸಲಾಗಿದ್ದು, ಸಮಾರಂಭದ ಅಂಗವಾಗಿ ಕೇಂದ್ರ ಭದ್ರತಾ ಏಜೆನ್ಸಿಗಳು ಮತ್ತು ದೆಹಲಿ ಪೊಲೀಸರು  ಬಹು ಹಂತದ ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಳನ್ನು ಯೋಜಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಅದರಂತೆ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಕಾರ್ಯಕ್ರಮದ ಸ್ಥಳವನ್ನು ಬದಲಾಯಿಸಿದರೆ ಆ ಸ್ಥಳಕ್ಕೆ ಅನುಗುಣವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಜೂನ್ 9 ಅಥವಾ 10ರಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮತ್ತೊಂದು ಮೂಲಗಳು ಖಚಿತಪಡಿಸಿವೆ. ಆರಂಭಿಕ ಮಾಹಿತಿಯ ಪ್ರಕಾರ, 12 ವಿದೇಶಿ ಗಣ್ಯರು ಸೇರಿದಂತೆ ಸುಮಾರು 10,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಜೂನ್ 4ರಂದು ನಡೆಯಲಿದೆ. 543 ಸದಸ್ಯ ಬಲದ ಲೋಕಸಭೆಗೆ ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳ ಜೊತೆಗೆ ಏಕಕಾಲದಲ್ಲಿ ಮತದಾನ ನಡೆಯಿತು. 7 ಹಂತಗಳಲ್ಲಿ ನಡೆದ ಸುದೀರ್ಘ ಅವಧಿಯ ಮತದಾನ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿದೆ. ಜೂನ್ 2ರಂದು ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.

ಜೂನ್ 1ರಂದು ನಡೆದ ಎಕ್ಸಿಟ್ ಪೋಲ್‌ಗಳು ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಭಾರೀ ಬಹುಮತದೊಂದಿಗೆ ಎನ್​ಡಿಎ 3ನೇ ಬಾರಿ ಅಧಿಕಾರಕ್ಕೆ ಬರಲಿದೆ ಎನ್ನಲಾಗುತ್ತಿದೆ. ಜೂನ್ 4ರಂದು ಮತ ಎಣಿಕೆ ನಡೆದಾಗ ಎಕ್ಸಿಟ್ ಪೋಲ್ ಭವಿಷ್ಯ ನಿಜವಾದರೆ, ಪ್ರಧಾನಿ ನರೇಂದ್ರ ಮೋದಿ ಅವರು ಜವಾಹರಲಾಲ್ ನೆಹರು ನಂತರ ಸತತ 3 ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಪ್ರಧಾನಿಯಾಗಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್