Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಳವಡಿಕೆಗೆ ವರದಿ ತಯಾರಿಸಿ: ಡಾ. ಸುರೇಶ್ ಇಟ್ನಾಳ

ಹವಾಮಾನ ಬದಲಾವಣೆಯ ಕಾರ್ಯಕ್ಷಮತೆಗಳ




ಕೊಪ್ಪಳ ಜೂನ್ 06: ಕೊಪ್ಪಳ ಜಿಲ್ಲೆಗೆ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯ ಕಾರ್ಯಕ್ಷಮತೆಗಳನ್ನು ಅಳವಡಿಸಿಕೊಳ್ಳುವುದರ ಬಗ್ಗೆ ವರದಿಯನ್ನು ತಯಾರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.
 ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಶುಕ್ರವಾರ (ಜೂನ್ 5ರಂದು) ಕೊಪ್ಪಳ ಜಿಲ್ಲಾ ಪಂಚಾಯತ್ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹವಾಮಾನ ಬದಲಾವಣೆ ಕುರಿತಾದ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
 ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯ ಕಾರ್ಯಕ್ಷಮತೆ ಸೂಚಕಗಳ ಬಗ್ಗೆ ಇಲಾಖಾ ಅಧಿಕಾರಿಗಳು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಕೊಪ್ಪಳ ಜಿಲ್ಲೆಗೆ ಈ ಕಾರ್ಯಕ್ಷಮತೆಗಳನ್ನು ಅಳವಡಿಸಿಕೊಳ್ಳುವುದಕ್ಕಾಗಿ ಸೂಕ್ತ ವರದಿಯನ್ನು ತಯಾರಿಸಲು ತಾವುಗಳು ಶ್ರಮಿಸಬೇಕು. ಇದರ ಜೊತೆಗೆ ಹೊಸ ತಂತ್ರಜ್ಞಾನಗಳ ಮೂಲಕ ತ್ಯಾಜ್ಯ ನಿರ್ವಹಣೆ ಮತ್ತು ತ್ಯಾಜ್ಯದಿಂದ ಇಂಧನ ಉತ್ಪಾದನೆಗೆ ಆದ್ಯತೆ ನೀಡಬೇಕು. ನದಿ, ಕೆರೆಗಳ ನೀರಿನ ಗುಣಮಟ್ಟದ ಕಾಪಾಡುವುದು, ಮಾಲಿನ್ಯ ತಡೆಗಟ್ಟಲು ಪರಿಸರವನ್ನು ಸುಸ್ಥಿರವಾಗಿಡಲು ಮತ್ತು ಹಸಿರು ಇಂಧನಗಳ ಬಳಕೆಯನ್ನು ಹೆಚ್ಚಿಸಲು ನಾವೆಲ್ಲರೂ ಕೈಜೊಡಿಸಬೇಕೆಂದರು ಅಭಿಪ್ರಾಯ ವ್ಯಕ್ತಪಡಿಸಿದರು.
 ಎಂಪ್ರಿ ಸಂಸ್ಥೆ ಬೆಂಗಳೂರಿನ ಹಿರಿಯ ಸಮಾಲೋಚಕರಾದ ಡಾ. ಬಿ. ಸರಿತಾ ಅವರು ಹವಾಮಾನ ಬದಲಾವಣೆ ಕುರಿತು ಕರ್ನಾಟಕ ಕ್ರಿಯಾ ಯೋಜನೆ ಬಗ್ಗೆ ಸುದೀರ್ಘವಿವರಣೆ ನೀಡಿದರು. ಜೊತೆಗೆ ಕಾರ್ಯನಿರ್ತಿ, ಕಾರ್ಯತಂತ್ರಗಳು ಮತ್ತು ವಿವಿಧ ಇಲಾಖೆಗಳ, ಸಂಘ-ಸಂಸ್ಥೆಗಳ ಕರ್ತವ್ಯವನ್ನು ವಿವರಿಸಿದರು ಹಾಗೂ ಅಲ್ಪಾವಧಿ ಹವಾಮಾನ ಮಾಲಿನ್ಯ ಕಾರಕಗಳ ಪರಿಣಾಮಗಳು ಮತ್ತು ಕೊಪ್ಪಳ ಜಿಲ್ಲೆಯಲ್ಲಿನ ಅವುಗಳ ದತ್ತಾಂಶಗಳ ಕುರಿತು ಮಾಹಿತಿ ನೀಡಿದರು.
 ಸಂಪನ್ಮೂಲ ವ್ಯಕ್ತಿಗಳಾದ ಶಶಿಕುಮಾರ್ ಅಭ್ಯರ್ಥಿಗಳಿಗೆ ಜಲ ಸಂಪನ್ಮೂಲ ವಲಯದ ಹವಾಮಾನ ಕ್ರಿಯಾ ಯೋಜನೆ ಕುರಿತು ಮಾಹಿತಿ ನೀಡಿದರು.
 ಕೊಪ್ಪಳ ಜಿಲ್ಲೆಯ ಎನ್.ಆರ್.ಡಿ.ಎಂ.ಎಸ್ ಅಧಿಕಾರಿಗಲಾದ ಗುರುಸ್ವಾಮಿಪಿ ಅವರು, ಅಭ್ಯರ್ಥಿಗಳಿಗೆ ಎನ್.ಆರ್.ಡಿ.ಎಂ.ಎಸ್ ಕೇಂದ್ರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಗದಾಂಬ ಅವರು ಉಪಸ್ಥಿತರಿದ್ದರು. ಲತ ಎಂ.ಎಚ್ ಅವರು ಕಾರ್ಯಕ್ರಮ ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ