Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಗಾಲಕ್ಕೆ ಸಿದ್ದತೆ : ಬೆಳಗಾವಿ ಪಾಲಿಕೆಯಿಂದ ನಾಲಾ ಸ್ವಚ್ಛತೆ

 ಬೆಳಗಾವಿ : ಮಳೆಗಾಲದಲ್ಲಿ ನಾಲಾಗಳು ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುವುದು ಸೇರಿದಂತೆ ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಬೆಳಗಾವಿ ಮಹಾನಗರ ಪಾಲಿಕೆಯಿಂದ ನಾಲಾ ಹೂಳೆತ್ತುವ ಹಾಗೂ ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ.

      ಮುಂಜಾಗೃತಾಕ್ರಮಕ್ಕೆ ಪಾಲಿಕೆ ಮುಂದಾಗಿದೆ. ಹಲವಾರು ಬಡಾವಣೆಗಳ ಸಾರ್ವಜನಿಕರಿಂದ ದೂರುಗಳು ಸಹ ಬಂದಿವೆ. ವಿವಿಧ ವಾರ್ಡ್ ಗಳ  ನಗರ  ಸೇವಕರೂ ಸಹ  ಮಳೆಗಾಲದಿಂದಾಗುವ ಅನಾನುಕೂಲತೆಗಳನ್ನು ಮುಂಚಿತವಾಗಿ  ಸರಿಪಡಿಸಬೇಕೆಂಬ ಸಲಹೆಯನ್ನು ಸಹ ನೀಡಿದ್ದರು. ಈ ಹಿನ್ನಲೆಯಲ್ಲಿ ಸ್ವಚ್ಛತೆಯ ಕಡೆಗೆ ಗಮನಹರಿಸಿರುವ ಪಾಲಿಕೆಯು  ಶೀಘ್ರದಲ್ಲೇ ಮಳೆಗಾಲ ಆರಂಭವಾಗುತ್ತಿರುವುದರಿಂದ ಮಹಾನಗರದ ವಿವಿಧ ಭಾಗಗಳಲ್ಲಿರುವ ನಾಲಾಗಳ ಹೂಳೆತ್ತುವ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ.ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಕಸ ವಿಲೇವಾರಿ ಮಾಡುವ ಕಾರ್ಯ, ಗಾಳಿ ಮಳೆಯಿಂದ ಬೀಳುವ ಹಂತದಲ್ಲಿರುವ ಹಾಗೂ ಚರಂಡಿ ನೀರು ಹರಿಯಲು ಅಡ್ಡಲಾಗಿರುವ ಹಾಗೂ ವಿದ್ಯುತ್ ತಂತಿಗಳ ಮೇಲೆ ಬಿದ್ದು ಅಪಾಯ ತಂದೊಡ್ಡಲಿರುವ ಗಿಡ ಮರಗಳನ್ನು  ತೆಗೆದುಹಾಕುವ ಕಾರ್ಯ ಸಹ ಭರದಿಂದ ಸಾಗಿದೆ.

news_1779095770_0_305.webp

 

 ಖುದ್ದು ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ ಅವರೇ ವಿವಿಧ ಬಡಾವಣೆಗಳಿಗೆ   ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅದೇ ಸಂದರ್ಭದಲ್ಲಿ  ಸಾರ್ವಜನಿಕರ ಅಹವಾಲುಗಳನ್ನು ಸಹ ಸ್ವೀಕರಿಸಿದ್ದಾರೆ.  ಅಧಿಕಾರಿಗಳಿಗೆ ಹಾಗೂ  ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದ್ದಾರೆ. ವಿಭಾಗದ ಅಭಿಯಂತರ ಅಂಕಿತ ಸೇರಿದಂತೆ ಇತರ ಅಧಿಕಾರಿಗಳು, ವಾರ್ಡನ ನಗರ ಸೇವಕರು ಹಾಗೂ ಸಿಬ್ಬಂದಿ ಆಯುಕ್ತರಿಗೆ ಸಾತ್ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ