Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳು ಜವಾಬ್ದರಿಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಲಿ: ಅಧ್ಯಕ್ಷ  ಎಸ್.ಆರ್.ಪಾಟೀಲ



ಧಾರವಾಡ : ರಾಜ್ಯ ಜನತೆಯ ಬದುಕು ಸುಧಾರಿಸಲು, ಅಭಿವೃದ್ಧಿಯಲ್ಲಿ ಎಲ್ಲರೂ ಭಾಗವಹಿಸಬೇಕು. ಈ ಹಿತ ಸಾಧನೆಗಾಗಿ ರಾಜ್ಯ ಸರಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಅಧಿಕಾರಿಗಳು ಮಾತಾಡುವದಲ್ಲ, ತಮ್ಮ ಕೆಲಸಗಳನ್ನು ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು.


 ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ  ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯವಿಧಾನ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೊಳಿಸಿದ ಬಗ್ಗೆ  ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆವಹಿಸಿ,ಮಾತನಾಡಿದರು.


ಗೃಹ ಜ್ಯೋತಿ ಯೋಜನೆಯಡಿ, ಅರ್ಹತೆ ಇರುವ ಎಲ್ಲ ಫಲಾನುಭವಿಗಳಿಗೆ ಸೌಲಭ್ಯ ಸೀಗಬೇಕು. ಗ್ರಾಮೀಣ ಭಾಗದಲ್ಲಿನ ಬಹಳಷ್ಟು ಜನ ಲೈನ್ ಮನ್ ಗಳು ತಾವೇ ವಿದ್ಯುತ್ ತೊಂದರೆಗಳನ್ನು ಪರಿಹರಿಸಲು ಮುಂದಾಗದೆ, ತಮ್ಮ ಸಹಾಯಕರನ್ನು ನೇಮಿಸಿಕೊಂಡು ಅವರಿಂದ ಮಾಡಿಸುತ್ತಾರೆ.


ತರಬೇತಿ ಇಲ್ಲದ ಹಾಗೂ ಕಂಪನಿ ಅನುಮತಿ ಇಲ್ಲದೆ ಅವರನ್ನು ನೇಮಿಸಿಕೊಂಡಿರುವದರಿಂದ ಅಮಾಯಕರು ವಿದ್ಯುತ್ ಅವಘಡದಲ್ಲಿ  ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.


 ಹೆಸ್ಕಾಂ ಅಧಿಕಾರಿಗಳು ಮಾಹಿತಿ ಇದ್ದರೂ ಈ ಕುರಿತು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಈ ಕುರಿತು ಹೆಸ್ಕಾಂ ಎಂ.ಡಿ ಅವರು ಗಂಭೀರವಾಗಿ ಪರಿಗಣಿಸಬೇಕು. ಲೈನ್ ಮನ್ ಗಳು ತಮಗೆ ಸಹಾಯಕರನ್ನು ನೇಮಿಸಿಕೊಂಡು, ಅವರಿಗೆ ಯಾವ ಸುರಕ್ಷತೆ ಇಲ್ಲದೆ ಕೆಲಸ ಕೊಡುತ್ತಿದ್ದಾರೆ. ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚಿಸಿದರು.


ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ, 4,11,746 ಕುಟುಂಬಗಳು ಪ್ರಯೋಜನೆ ಪಡೆಯುತ್ತಿದ್ದಾರೆ. ಕಳೆದ ತಿಂಗಳು 23.38 ಕೋಟಿ ಝೀರೋ ಬಿಲ್ಲ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.


ಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಂತೆ ಎಚ್ಚರವಹಿಸಬೇಕು. ಯಾವುದೇ ಅರ್ಹ ಪಲಾನುಭಿ ಸರಕಾರದ ಯೋಜನೆಗಳಿಂದ ಹೊರಗುಳಿಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಅಧ್ಯಕ್ಷರು ಹೇಳಿದರು.


ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.


ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷರಾದ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್ ರಝಾ ಐನಾಪೂರಿ, ರತ್ನಾ ತೇಗೂರಮಠ ವೇದಿಕೆಯಲ್ಲಿದ್ದರು.


ಜಿಲ್ಲಾ ಪ್ರಾಧಿಕಾರದ ಸದಸ್ಯರಾದ ಅರವಿಂದ ಏಗನಗೌಡರ, ಬಸಪ್ಪ ಮಹಾಬಳೇಶ್ವರ ಬಾವಕಾರ, ಅಬ್ದುಲ ಗಣಿ ಅಹ್ಮದವಾಲಿ, ಅಬ್ದುಲ್ ರಸೀದ ಬೋಳಾಬಾಯಿ ಹಾಗೂ ಇತರ ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ