ಬೆಂಗಳೂರು, ನವೆಂಬರ್ 1: ಬೆಂಗಳೂರು ನಗರ ಹಾಗೂ ಕರ್ನಾಟಕದ ವಿವಿಧ ಕಡೆಗಳಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ
ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಜನತೆಗೆ ಕನ್ನಡದಲ್ಲಿಯೇ ಶುಭ ಕೋರಿದ್ದಾರೆ. ಉಭಯ ನಾಯಕರು ಎಕ್ಸ್ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.
‘ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಎಕ್ಸ್ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.