Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ನರೇಂದ್ರಮೋದಿಯಿಂದ ದೇಶಕ್ಕೆ ಗೌರವ ದೊರೆತಿದೆ  : ಬಿ ಶ್ರೀರಾಮುಲು






ಬಳ್ಳಾರಿ,ಜೂ,11: ನರೇಂದ್ರ ಮೋದಿಜಿ ಅವರು ದೇಶದ ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ತೀರಾ ಸಂಕಷ್ಟದಲ್ಲಿತ್ತು, ಮೋದಿ ಪ್ರಧಾನಿಯಾದ ಮೇಲೆ ಇಡೀ ವಿಶ್ವಕ್ಕೆ ಭಾರತ ಮಾದರಿ ದೇಶವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಅಭಿಪ್ರಾಯಪಟ್ಟರು.


 ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರ 11 ವರ್ಷ ಪೂರೈಸಿದ ಹಿನ್ನೆಲೆ ಹನ್ನೊಂದು ವರ್ಷದ ಸಾಧನೆ ಕುರಿತು  ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಶ್ರೀರಾಮುಲು , ನರೇಂದ್ರ ಮೋದಿ ಬರೋದಕ್ಕೂ ಮೊದಲು ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು ಈಗ ಕಾಲ ಬದಲಾಗಿದೆ,  ಭಾರತವನ್ನು ಪ್ರಧಾನಿ ಮೋದಿ

ವಿಶ್ವವೇ ಭಾರತದ ಕಡೆ ತಿರುಗಿ

ನೋಡುವಂತೆ ಮಾಡಿದ್ದಾರೆ. ನೆಹರು   ವೈಯಕ್ತಿಕ ಹಿತಾಸಕ್ತಿಗೆ ಕೆಲಸ ಮಾಡಿದ್ದರು.ದೇಶದ ಅಭಿವೃದ್ಧಿ ಬಗ್ಗೆ ನೆಹರು ಕುಟುಂಬ ಚಿಂತನೆ ಮಾಡಿಲ್ಲ.ವೈಯಕ್ತಿಕ ಅಭಿವೃದ್ಧಿ ಹೊಂದಿದ್ದ ಹೊರತು ದೇಶ ಅಭಿವೃದ್ಧಿ ಮಾಡಲಿಲ್ಲ. ಚೀನಾ-ಭಾರತದ ಯುದ್ಧದಲ್ಲಿ ಭಾರತ ಮಂಡಿಯೂರಿತು.ಇದಕ್ಕೆ ನೆಹರು ನಿಲುವು ಕಾರಣವಾಯಿತು. ನೆಹರು ಅವರ ಕಾಲಘಟ್ಟ ಕೆಟ್ಟದಾಗಿತ್ತು, ಸಾವಿರಾರು ಸೈನಿಕರು ಹುತಾತ್ಮರಾದರು ಎಂದು ನೆಹರು ಮತ್ತು ಇಂದಿರಾ ಗಾಂಧಿ ಕಾಲಘಟ್ಟದ ರಾಜಕೀಯವನ್ನು ವಿಶ್ಲೇಷಿಸಿದರು.


ಇಂದಿರಾಗಾಂಧಿ ಸರ್ವಾಧಿಕಾರಿ ಧೋರಣೆಯಿಂದ ತುರ್ತು ಘೋಷಣೆ ಮಾಡಿದ್ದರು.ಕಮಿಷನ್ ಮಧ್ಯವರ್ತಿಗಳನ್ನು ಬೆಳೆಸೋದೇ ಗಾಂಧಿ ಕುಟುಂಬದ ಕೆಲಸ ರಾಹುಲ್‌ ಸೋನಿಯಾ ಕೂಡ ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಜೈಲಿಗೆ ಹೋಗುತ್ತಾರೆ.ನ್ಯಾಷನಲ್ ಹೆರಾಲ್ಡ್ ದೊಡ್ಡ ಗೋಲ್‌ಮಾಲ್, ಪ್ರಕರಣದಲ್ಲಿ ಕರ್ನಾಟಕದ ನಾಯಕರು ಇದ್ದಾರೆ.ವಿಶ್ವದಲ್ಲಿ ಭಾರತಕ್ಕೆ ಗೌರವ ಸಿಗುವಂತೆ ಮಾಡಿದ್ದು ಮೋದಿ.60 ವರ್ಷದ ಕಾಂಗ್ರೆಸ್‌ ಆಳ್ವಿಕೆಯಲ್ಲಿ ಭಾರತ ದುರ್ಬಲ ದೇಶವಾಗಿತ್ತು.ಯುಪಿಎ ಆಳ್ವಿಕೆಯಲ್ಲಿ ದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿತ್ತು ಎಂದು ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದ ವಿರುದ್ಧ ಹರಿ ಹಾಯ್ದರು.



 ಹತ್ತು ವರ್ಷದಲ್ಲಿ ಭಾರತ ಆರ್ಥಿಕವಾಗಿ ಪ್ರಬಲ ದೇಶವಾಗಿ ಬದಲಾಗಿದೆ.ವಿರೋಧ ಪಕ್ಷದಲ್ಲಿ ಕೂಡುವಷ್ಟು ಸ್ಥಾನವನ್ನು ಮಾತ್ರ ಕಾಂಗ್ರೆಸ್‌ ಲೋಕಸಭೆಯಲ್ಲಿ ಗಳಿಸಿದೆ. ಕಾಂಗ್ರೆಸ್ ಆಳ್ವಿಕೆಯ ರಾಜ್ಯದಲ್ಲಿ ಕ್ರೈಂ ಪ್ರಕರಣ ಹೆಚ್ಚಾಗಿವೆ.


ದೇಶದಲ್ಲಿ ಹೆಚ್ಚು ವಿಮಾನ ನಿಲ್ದಾಣ ಸ್ಥಾಪನೆ,ರೈಲ್ವೆ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಹೆಚ್ಚಾಗಿ ನಿರ್ಮಾಣವಾಗಿವೆ.370 ರದ್ದಾದ ಬಳಿಕ ದೇಶಕ್ಕೆ ಬೆಂಕಿ ಹತ್ತುತ್ತದೆ ಎಂದಿದ್ದರು,ಆದರೆ ಮೋದಿ ಅದ್ಯಾವುದಕ್ಕೂ ಅವಕಾಶ ಕೊಡಲಿಲ್ಲ.ತ್ರಿವಳಿ ತಲಾಕ್ ರದ್ದು, ವಕ್ಸ್ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಜನಪರ ಕೆಲಸ ಮಾಡಿದ್ದಾರೆ.ಉಗ್ರರನ್ನು ಮಟ್ಟ ಹಾಕುವ ಕೆಲಸ ಮಾಡಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ ಎಂದು ಮೋದಿ ಸರ್ಕಾರದ ಯೋಜನೆ ಮತ್ತು ಅಭಿವೃದ್ಧಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.



ಈ ಸಂದರ್ಭದಲ್ಲಿ  ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ ಸೋಮಲಿಂಗಪ್ಪ ಎಂ ಎಲ್ ಸಿ ವೈ ಎಂ ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಅನಿಲ್ ನಾಯ್ಡು ಮೋಕ, ಸೇರಿದಂತೆ ಅನೇಕ ಜನ ಉಪಸ್ಥಿರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ