LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ : ಸಿಇಓ ಗಜಾನನ ಬಾಲೆ

ವಿಬಿಜಿ-ರಾಮ್‌ಜಿ ಕಾಮಗಾರಿ ಪರಿಶೀಲನೆ | ತ್ಯಾಜ್ಯ ನೀರು ಕೆರೆಗೆ ಹರಿಯದಂತೆ ಕಟ್ಟು ನಿಟ್ಟಿನ ಸೂಚನೆ 

ಬಾಗಲಕೋಟೆ : ಆಗಸ್ಟ ೨೧ : ಬಾಗಲಕೋಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಗುರುವಾರ ಭೇಟಿ ನೀಡಿ ವಿಬಿಜಿ-ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಅಭಿವೃದ್ದಿ ಹಾಗೂ ಸ್ವಚ್ಚತಾ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆನಕಟ್ಟಿ ಗ್ರಾಮ ಪಂಚಾಯತಿಯ ಕೆರೆ ಕಾಮಗಾರಿ ಪರಿಶೀಲಿಸಿದ ವೇಳೆ ಗ್ರಾಮದ ತ್ಯಾಜ್ಯ ನೀರು ಕೆರೆಗೆ ಹರಿಯುತ್ತಿರುವುದನ್ನು ಗಮನಿಸಿದ ಸಿಇಓ ಅವರು ವೈಜ್ಞಾನಿಕ ಚರಂಡಿ ವ್ಯವಸ್ಥೆ ಕಲ್ಪಿಸಿ ತ್ಯಾಜ್ಯ ನೀರು ಕೆರೆಗೆ ಸೇರುವುದನ್ನು ತಕ್ಷಣ ತಡೆಯುವಂತೆ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ನಿರ್ಲಕ್ಷ ಕಂಡುಬಂದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಕಾರ್ಮಿಕರು ಗಟ್ಟಿಯಾದ ಮಣ್ಣಿನಿಂದ ಕಾಮಗಾರಿ ಕಷ್ಟವಾಗುತ್ತಿದೆ ಎಂದು ತಿಳಿಸಿದಾಗ ಸ್ವತಃ ಸಿಇಓ ಅವರು ಸ್ಥಳದಲ್ಲಿ ಮಣ್ಣು ಅಗೆದು ಪರಿಶೀಲಿಸಿದರು. ಮಣ್ಣು ತೆಗೆಯಲು ಸಾಧ್ಯವಿರುವದನ್ನು ಖಚಿತಪಡಿಸಿದರು. ಮಾಪನದಲ್ಲಿ ಯಾವುದೇ ಸಡಿಲಿಕೆ ನೀಡಲು ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಕಾರ್ಮಿಕರ ಕೂಲಿ ವಿಳಂಬವಾಗದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. 
ಸಮರ್ಪಕ ಡ್ರಾಯಿಂಗ್, ವಿನ್ಯಾಸ ಹಾಗೂ ತಾಂತ್ರಿಕ ಯೋಜನೆ ಇಲ್ಲದೇ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಿದ ತಾಂತ್ರಿಕ ಅಭಿಯಂತರ ಹಾಗೂ ತಾಂತ್ರಿಕ ಸಹಾಯಕ ಅಭಿಯಂತರರಿಗೆ ಶೋಕಾಸ್ ನೋಟಿಸ್ ನೀಡುವಂತೆ ಸೂಚಿಸಿದರು. ಮುಂದಿನ ಕಾಮಗಾರಿಗಳನ್ನು ಅಂದಾಜು, ತಾಂತ್ರಿಕ ಮಾರ್ಗದರ್ಶನ ಹಾಗೂ ಸ್ಥಳ ಪರಿಶೀಲನೆಯ ಬಳಿಕವೇ ಆರಂಭಿಸುವಂತೆ ನಿರ್ದೇಶನ ನೀಡಿದರು. ಕಾರ್ಮಿಕರಿಗೆ ಕೂಲಿ ಹಣವನ್ನು ವಿಳಂಬವಿಲ್ಲದೇ ಪಾವತಿಸುವಂಥೆ ಸೂಚಿಸಿದರು.
ಕದಲಿಮಟ್ಟಿ ಗ್ರಾಮ ಪಂಚಾಯತಿಯ ಲವಳೇಶ್ವರ ತಾಂಡಾದಲ್ಲಿ ೧೦೦ಕ್ಕೂ ಹೆಚ್ಚು ಕಾರ್ಮಿಕರು ಕೆರೆ ಸ್ವಚ್ಛತಾ ಕಾಮಗಾರಿಯಲ್ಲಿ ತೊಡಗಿರುವುದನ್ನು ಪರಿಶೀಲಿಸಿದರು. ಒಳಹರಿವು-ಹೊರಹರಿವು ಚಾನೆಲ್ ವ್ಯವಸ್ಥೆ ಕಲ್ಪಿಸಿ ಕೆರೆಯ ಗಡಿ ಗುರುತಿಸಿದ ಬಳಿಕ ಮುಂದಿನ ಅಭಿವೃದ್ದಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಹಿರೇಗುಳಬಾಳದ ಮೂರಮಟ್ಟಿ ಕೆರೆ ಪರಿಶೀಲಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೂದಾಖಲೆ ಇಲಾಖೆಯ ಉಪನಿರ್ದೇಶಕರ ಮೂಲಕ ಸರ್ವೆ ಮಾಡಿ ನಿಖರ ಗಡಿ ಗುರುತಿಸುವಂತೆ ಹಾಗೂ ಒತ್ತುವರಿ ತೆರವುಗೊಳಿಸಿ ಕೆರೆಯ ಮೂಲ ಸ್ವರೂಪವನ್ನು ಪುನಃಸ್ಥಾಪಿಸುವಂತೆ ನಿರ್ದೇಶನ ನೀಡಿದರು.
ಭೇಟಿ ಸಮಯದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ಸಹಾಯಕ ನಿರ್ದೇಶಕ ಸಿದ್ದು ನಕ್ಕರಗುಂದಿ, ಡಿಐಇಸಿಯ ಅಜಯ ಸೂಳಿಕೇರಿ, ತಾಂತ್ರಿಕ ಸಂಯೋಜಕ, ತಾಂತ್ರಿಕ ಸಹಾಯಕ ಅಭಿಯಂತರ, ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ