Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಿಯಾ ಸುದೀಪ್ ಸಂಸ್ಥೆ ಸುಪ್ರಿಯಾನ್ವಿ ಹೊಸ ಕಥೆ ಪ್ರತಿಭೆಗಳಿಗೆ ಅವಕಾಶ

ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್‌ ಈಗಾಗಲೇ ನಿರ್ಮಾಪಕಿ ಹಾಗೂ ವಿತರಕಿಯಾಗಿದ್ದಾರೆ. ಈಗ ಅವರು  ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮುಂದಾಗಿದ್ದಾರೆ.

      ಪ್ರಿಯಾ ಸುದೀಪ್ ಅವರು ತಮ್ಮ ಹುಟ್ಟುಹಬ್ಬದ ಸಂಭ್ರಮದ ದಿನದಂದು ಅವರು ಈ ಹೊಸ ಹೆಜ್ಜೆ ಇಟ್ಟಿದ್ದಾರೆ.

     ಪ್ರಿಯಾ ಸುದೀಪ್ ಅವರು ಸುಪ್ರಿಯಾನ್ವಿ ಸ್ಟುಡಿಯೋ ಮೂಲಕ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಗೊತ್ತೇ ಇದೆ . ಮ್ಯಾಂಗೋ ಪಚ್ಚ ಚಿತ್ರದ ಮೂಲಕ . ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗುತ್ತಿದ್ದಾರೆ.‌ ಅಲ್ಲದೇ ಇತ್ತೀಚೆಗೆ ಮಾರ್ಕ್ ಚಿತ್ರದ ವಿತರಣೆ ಮಾಡುವ ಮೂಲಕ ವಿತರಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಇದೀಗ ತಮ್ಮದೇ ಸುಪ್ರಿಯಾನ್ವಿ‌ ಮೂಲಕ ಹೊಸ ಪ್ರತಿಭೆಗಳಿಗೆ ವೇದಿಕೆ‌ ಕಲ್ಪಿಸಲು ತೀರ್ಮಾನ ಮಾಡಿದ್ದಾರೆ.


     ಪ್ರಿಯಾ ಸುದೀಪ್ ಹುಟ್ಟುಹಬ್ಬಕ್ಕೆ ಸುಪ್ರಿಯಾನ್ವಿ‌ ನಿರ್ಮಾಣ‌ ಸಂಸ್ಥೆಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾ ಸುದೀಪ್ "ಹೆಮ್ಮೆ ಮತ್ತು ಉತ್ಸಾಹದಿಂದ, ನಾವು ತಾಯಿ ಭದ್ರಕಾಳಿಯ ಪವಿತ್ರ ಆಶೀರ್ವಾದ ಮತ್ತು ನಮ್ಮ ಮೌಲ್ಯಯುತ ಪ್ರೇಕ್ಷಕರ ಆತ್ಮೀಯ ಪ್ರೋತ್ಸಾಹವನ್ನು ಕೋರುತ್ತೇವೆ. ನಾವು ಸುಪ್ರಿಯಾನ್ವಿ ಪಿಕ್ಚರ್ಸ್ ಸ್ಟುಡಿಯೋ ಮೋಷನ್ ಪೋಸ್ಟರ್ ಅನ್ನು ಪ್ರಸ್ತುತಪಡಿಸುತ್ತೇವೆ". ಈ ಕ್ಷಣವು ಬಲವಾದ ವಿಷಯ, ಹೊಸ ಧ್ವನಿಗಳು ಮತ್ತು ಪ್ರಭಾವಶಾಲಿ ಸಿನೆಮಾಗಳಿಗೆ ಮೀಸಲಾಗಿರುವ ಸೃಜನಾತ್ಮಕ ವೇದಿಕೆಯ ಪ್ರಾರಂಭವನ್ನು ಸೂಚಿಸುತ್ತದೆ. ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಅರ್ಥಪೂರ್ಣ ಸಿನೆಮಾ ಮತ್ತು ಶಕ್ತಿಯುತ ಕಥೆಗಳ ಭರವಸೆಯೊಂದಿಗೆ ಮುಂದುವರಿಯುತ್ತದೆ.ಹೊಸ ಪ್ರಯಾಣ ಇಂದು ಪ್ರಾರಂಭವಾಗುತ್ತದೆ - ಮುಂದಿನದಕ್ಕಾಗಿ ಸಿದ್ಧ ಆಗಿರಿ" ಎಂದು ಬರೆದುಕೊಂಡಿದ್ದಾರೆ.

     ಹೊಸ ಹೊಸ ಕಥೆಗಳಿಗೆ, ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕಲ್ಪಿಸಲು ವಿಭಿನ್ನ ಬಗೆಯ ಕಂಟೆಂಟ್ ಆಧಾರಿತ ಸಿನಿಮಾಗಳು ಸುಪ್ರಿಯಾನ್ವಿ ಪ್ರೊಡಕ್ಷನ್ ನಡಿ ಮೂಡಿ ಬರಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ