Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ 

ಗೋಕಾಕ: ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ವೃತ್ತಿ ಪಾವಿತ್ರ್ಯತೆ ಕಾಪಾಡಿಕೊಂಡು ಪ್ರಾಮಾಣಿಕವಾಗಿ ಬೋಧನೆ ಮಾಡಿ ಉತ್ತಮ ಭಾವಿ ಪ್ರಜೆಗಳನ್ನು ದೇಶಕ್ಕೆ ಕೊಡುಗೆ ನೀಡಬೇಕೆಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು.


ನಗರದ ಸತೀಶ್‌ ಶುಗರ್ಸ್‌ ಅಕ್ಯಾಡೆಮಿ ಪದವಿ ಮಹಾವಿದ್ಯಾಲಯ ಹಾಗೂ ನಾಯಿಕ ಸುಡೆಂಟ್‌ ಫೆಡರೇಷನ್‌ ಪ್ರೌಢ ಶಾಲೆಯ ನೂತನ  ಕಟ್ಟಡದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.


ಶೈಕ್ಷಣಿಕ ಕ್ಷೇತ್ರ ಉದಾರೀಕರಣಕ್ಕಾಗಿ ತಂದೆ, ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ಈ ಭಾಗದಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಉತ್ತಮ ಸಮಾಜ, ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಏಳಿಗೆಗಾಗಿ ಶಿಕ್ಷಕರೊಂದಿಗೆ ನಾವು ಶ್ರಮ ವಹಿಸುತ್ತೇವೆ ಎಂದರು.


ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ಸಿ. ಎಮ್.‌ ತ್ಯಾಗರಾಜ ಮಾತನಾಡಿ, ನಲವತ್ತು ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿ, ಸಾವಿರಾರೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ತೃಪ್ತಿ ನನಗಿದೆ. ಇನ್ನು ಸಚಿವ ಸತೀಶ್‌ ಜಾರಕಿಹೊಳಿಯವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಬಗ್ಗೆ ಅತ್ಯಂತ ಗೌರವ ಇದೆ. ಅವರು ನಾಯಿಕ ಸುಡೆಂಟ್‌ ಫೆಡರೇಷನ್‌ ಮೂಲಕ ಸಾವಿರಾರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರ್ಯವನ್ನು ಶ್ಲಾಘಿಸಿದರು.


ರಾಜ್ಯ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ ಮಾತನಾಡಿ, ಗೋಕಾಕ ತಾಲೂಕಿಗೆ ಈಗಾಗಲೇ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಮಂಜೂರಾಗಿದ್ದು, ಸದ್ಯಕ್ಕೆ ಕಾಲೇಜು ಆರಂಭಕ್ಕಾಗಿ ಸತೀಶ್‌ ಶುಗರ್ಸ್‌ ಅಕ್ಯಾಡೆಮಿ ಪದವಿ ಮಹಾವಿದ್ಯಾಲಯದ ಕಟ್ಟಡವನ್ನು ಒದಗಿಸೋಣ ಎಂದು ತಂದೆ, ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕಾಲೇಜು ಆರಂಭವಾದರೆ ಇಲ್ಲಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯಲಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಸತೀಶ್‌ ಶುಗರ್ಸ್‌ ಅಕ್ಯಾಡೆಮಿ ಟ್ರಸ್ಟಿ ವಿಠ್ಠಲ್‌ ಪರಸನ್ನವರ್‌, ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ, ಸತೀಶ್‌ ಶುಗರ್ಸ್‌ ಅಕ್ಯಾಡೆಮಿ ಆಡಳಿತಾಧಿಕಾರಿ ಪ್ರಕಾಶ ಲಕ್ಮೆಟ್ಟಿ, ಮಹೇಶ ಚಿಕ್ಕೋಡಿ ಸೇರಿದಂತೆ  ಸತೀಶ್‌ ಶುಗರ್ಸ್‌ ಅಕ್ಯಾಡೆಮಿ ಪದವಿ ಮಹಾವಿದ್ಯಾಲಯ ಹಾಗೂ ನಾಯಿಕ ಸುಡೆಂಟ್‌ ಫೆಡರೇಷನ್‌ ಪ್ರೌಢ ಶಾಲೆಯ ಶಿಕ್ಷಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ