Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಂಕಾ ಜಾರಕಿಹೊಳಿ




ನವದೆಹಲಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ವಿಜಯ ಸಾಧಿಸಿದ ಪ್ರಿಯಂಕಾ ಜಾರಕಿಹೊಳಿಯವರು ಇಂದು  ನವದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.


ಪ್ರಿಯಂಕಾ ಜಾರಕಿಹೊಳಿ ಅವರಿಗೆ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಿಯಂಕಾ ಜಾರಕಿಹೊಳಿ ಅವರು ಸಂವಿಧಾನ  ಹೆಸರಿನಲ್ಲಿ  ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು.


ಪ್ರಮಾಣ ವಚನ ಸ್ವೀಕಾರ ಬಳಿಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಖುಷಿ ವ್ಯಕ್ತಪಡಿಸಿದ ಅವರು, 18ನೇ ಲೋಕಸಭೆಯ ಸದಸ್ಯೆಯಾಗಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಭರ್ತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಈ ಧನ್ಯತೆಯ ಕ್ಷಣಕ್ಕೆ ಕಾರಣಿಕರ್ತರಾದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಎಲ್ಲಾ ಸರ್ವರಿಗೂ ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆಂದು ತಿಳಿಸಿದ್ದಾರೆ.


ಅಭಿವೃದ್ಧಿ ಮೂಲಮಂತ್ರ ಎಂದ ಸಂಸದೆ ಪ್ರಿಯಂಕಾ: ಅತ್ಯಂತ ಕಿರಿಯ ವಯಸ್ಸಿನಲ್ಲಿ ಜನಸೇವೆ ಮಾಡುವ ಅವಕಾಶ ನನಗೆ ದೊರಕಿದೆ. ರಾಜಕೀಯ ಅನುಭವ ಇರುವ ಸಂಸದರೊಂದಿಗೆ ಕಾರ್ಯನಿರ್ವಹಿಸುವ ಅವಕಾಶ ದೊರಕಿರುವುದು ನನಗೆ ಹೆಮ್ಮೆ ತಂದಿದೆ. ನನಗೆ ಅವಕಾಶ ಕಲ್ಪಿಸಿದ ಎಐಸಿಸಿ ಅಧ್ಯಕ್ಷರು ಮತ್ತು ಪಕ್ಷದ ಹಿರಿಯರಾದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನನ್ನ ಪೂಜ್ಯ ತಂದೆಯವರಾದ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಗಲಿರುಳು ಶ್ರಮಿಸಿ ಲೋಕಸಭಾ ಚುನಾವಣೆಯಲ್ಲಿ ನನಗೆ ಪ್ರಚಂಡ ಬಹುಮತ ಬರುವಂತೆ ಮಾಡಿದ ಎಲ್ಲಾ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು,  ಮುಂಬರುವ ದಿನಗಳಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಎಲ್ಲ ಮತಕ್ಷೇತ್ರಗಳಿಗೆ ಭೇಟಿ ನೀಡಿ ಇಲ್ಲಿನ ಪ್ರಮುಖ ಬೇಡಿಕೆಗಳನ್ನ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.


ಕೇವಲ 27 ವರ್ಷಕ್ಕೇ ಎಂಪಿಯಾದ ಪ್ರಿಯಂಕಾ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ, ಪ್ರಿಯಂಕಾ ಜಾರಕಿಹೊಳಿ ಅವರು ಕೇವಲ 27ನೇ ವಯಸ್ಸಿನಲ್ಲೇ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆ ಅವರನ್ನು96 ಸಾವಿರ ಮತಗಳಿಂದ  ಸೋಲಿಸಿ ಭಾರತದ ಅತಿ ಕಿರಿಯ ಸಂಸದೆಯರಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿಯೂ 27ನೇ ವಯಸ್ಸಿನಲ್ಲಿ ಸಂಸದೆಯಾದ ಮೊದಲ ಮಹಿಳೆ ಎಂಬ ಕೀರ್ತಿಗೆ ಪ್ರಿಯಂಕಾ ಜಾರಕಿಹೊಳಿ ಪಾತ್ರರಾಗಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ