Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಯನಾಡ್ ಭೇಟಿಗೂ ಮುನ್ನ ಬೆಂಗಳೂರಿಗೆ ರಾಹುಲ್, ಪ್ರಿಯಾಂಕಾ

ಬೆಂಗಳೂರು, ಜೂನ್ 11: ಕಾಂಗ್ರೆಸ್  ಸಂಸದ ರಾಹುಲ್ ಗಾಂಧಿ  ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್​​, ಪ್ರಿಯಾಂಕಾರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್​ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಉಭಯ ನಾಯಕರು ನಾಳೆ ಬೆಳಗ್ಗೆ ಕೇರಳದ ವಯನಾಡ್​​ಗೆ ತೆರಳಲಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಹುಲ್ ಹಾಗೂ ಪ್ರಿಯಾಂಕಾ ಕೇರಳದ ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ಬುಧವಾರ ಮತದಾರರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ತೊರೆದು ರಾಯ್​ಬರೇಲಿ ಉಳಿಸಿಕೊಂಡರೆ ಅವರ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ರಾಯಬರೇಲಿಯನ್ನು ಉಳಿಸಿಕೊಂಡು ಹಾಲಿ ಕ್ಷೇತ್ರವಾದ ವಯನಾಡನ್ನು ಹೊರಗಿಡುವ ಬಗ್ಗೆ ರಾಹುಲ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ