Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು:ಸಂಸದೆ ಪ್ರಿಯಾಂಕಾ ಜಾರಕಿಹೊಳಿ






ಬೆಳಗಾವಿ: ದಿನದಿಂದ ದಿನಕ್ಕೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಬಹಳಷ್ಟು ದೊಡ್ಡದಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು.


ನಗರದ ಕನ್ನಡ ಭವನದಲ್ಲಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ಚಿಕ್ಕ ವಯಸ್ಸಿನಿಂದ ನನಗೆ ಮಾಧ್ಯಮ ರಂಗ ಪರಿಚಯವಿದೆ. ಇದಕ್ಕೆ ತಂದೆಯವರೆ ಕಾರಣ. ತಂತ್ರಜ್ಞಾನ ಅಭಿವೃದ್ಧಿಯ ಪರಿಣಾಮ ಇಂದು ಸ್ಥಳದಲ್ಲಿಯೇ ನಾವು ದಿನನಿತ್ಯ ನಡೆಯುತ್ತಿರುವ ಬೆಳವಣಿಗೆಗಳ ಮಾಹಿತಿ ಪಡೆಯುತ್ತಿದ್ದೇವೆ ಎಂದರು.


ಪ್ರಸ್ತುತ ದಿನಗಳಲ್ಲಿ ಸಮೂಹ ಮಾಧ್ಯಮಗಳು ಸಾಮಾಜಿಕ ಬದಲಾವಣೆಯಲ್ಲಿ ಮಹತ್ವದ ಪಾತ್ರವಹಿಸಬೇಕು. ಜನರ ದೃಷ್ಟಿಕೋನ, ನಂಬಿಕೆ, ಕೌಶಲಗಳ ಬದಲಾವಣೆ ಆಗಬೇಕು. ಈ ಬದಲಾವಣೆ ತರಲು ಶಿಕ್ಷಣ, ತಿಳಿವಳಿಕೆ ಮೂಡಿಸುವ ಕೆಲಸ ಸಮೂಹ ಮಾಧ್ಯಮಗಳ ಮೇಲಿದೆ ಎಂದು ತಿಳಿಸಿದರು.


ಇದೇ ವೇಳೆ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನಿಮಿತ್ಯ ಹಮ್ಮಿಕೊಂಡಿದ್ದ ಕ್ರೀಡೆಗಳಲ್ಲಿ ಪಾಲ್ಗೊಂಡು ಜಯ ಸಾಧಿಸಿದ ತಂಡಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಶುಭ ಕೋರಿದರು.


ಈ ಸಂದರ್ಭದಲ್ಲಿ ಸಂಸದ ಈರಣ್ಣ ಕಡಾಡಿ, ಬೆಳಗಾವಿ ಪೊಲೀಸ್‌ ಆಯುಕ್ತ ಭೂಷಣ ಗುಲಾಬರಾವ್‌ ಬೋಸರೆ,  ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ  ಮಂಜುನಾಥ ಪಾಟೀಲ್, ಪತ್ರಕರ್ತರಾದ ರಿಷಕೇಶಿ ಬಹದ್ದೂರ್ ದೇಸಾಯಿ, ಹಿರಿಯ ಪತ್ರಕರ್ತರಾದ ವಿಲಾಸ ಜೋಷಿ, ಅನಿಲ ಕಾಜಗಾರ, ಸಿದ್ದನಗೌಡ  ಪಾಟೀಲ್ ಸೇರಿದಂತೆ ಅನೇಕ ಪತ್ರಕರ್ತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ