Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮ ಪುರೋಹಿತನೊಬ್ಬನಿಗೆ ಹುಟ್ಟಿದ್ದು: ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ

ಹರಿಹರ: ರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನೊಬ್ಬನಿಗೆ ಹುಟ್ಟಿರುವುದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಹೇಳಿದ್ದಾರೆ.

ನಗರದ ಹೊರವಲಯದ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಮಾಯಣದ ರಾಮ ದಶರಥ ಮಹಾರಾಜರ ಮಗ ಎಂಬುದಷ್ಟೆ ತಿಳಿದ ವಿಷಯವಾದರೂ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ, ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದನು. ಅದೇ ರೀತಿ ಮಹಾಭಾರತದ ವಿಷಯಕ್ಕೆ ಬಂದರೆ, ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ’ ಎಂದರು.

ಪುರಾಣಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲ ಜಾತಿ, ಜನಾಂಗದವರನ್ನು ಶೂದ್ರರೆಂದು ಕರೆದಿವೆ.

ಶೂದ್ರರೆಲ್ಲಾ ಬ್ರಾಹ್ಮಣರ ಸೇವಕರು ಎಂಬುದನ್ನು ಸಾರಿ ಹೇಳಿದೆ ಎಂದರು. ಮನುಷ್ಯರನ್ನು ಮನುಷ್ಯರಂತೆ ಕಾಣದ ಇಂತಹ ಪುರಾಣ, ಮನುಸ್ಮೃತಿಯಿಂದ ದೇಶದ ಬಹುಸಂಖ್ಯಾತರಿಗೆ ಏನೂ ಪ್ರಯೋಜನವಿಲ್ಲ, ಆದರೆ ಕೆಲವರು ಪುರಾಣ, ಮನುಸ್ಮೃತಿಯನ್ನು ತಲೆ ಮೇಲೆ ಹೊತ್ತು ಅದರ ಪ್ರಕಾರ ಆಡಳಿತ ನಡೆಸುತ್ತೇವೆಂದು ಕುಣಿಯುತ್ತಾರೆ ಎಂದು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*