Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಯು ವಿಹಾರದೊಂದಿಗೆ ಪ್ರಗತಿ ಪರಿಶೀಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನೂತನ ಕಾರ್ಯಕ್ರಮ





ಬೆಳಗಾವಿ:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮುಂಜಾನೆ 7 ಗಂಟೆಗೆ ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ವಾಯುವಿಹಾರದ ಜೊತೆಗೆ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.


ಕಳೆದವಾರ ಕೂಡ ವಿವಿಧ ಬಡಾವಣೆಗಳಲ್ಲಿ ವಾಯುವಿಹಾರದ ಜೊತೆಗೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದ ಸಚಿವರು ಭಾನುವಾರ ಕುಮಾರಸ್ವಾಮಿ ಬಡಾವಣೆಯಲ್ಲಿ ಪರಿಶೀಲನೆ ನಡೆಸಿದರು.

 ಬಡಾವಣೆಯಲ್ಲಿರುವ ಮೂರು ಉದ್ಯಾನವನಗಳ ನಿರ್ವಹಣೆ, ಬಡಾವಣೆಯ ಮುಖ್ಯ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ವ್ಯವಸ್ಥೆ, ನೀರಿನ ಸರಬರಾಜು, ಬೀದಿಗಳ ಸ್ವಚ್ಛತೆ, ಬೀದಿ ದೀಪಗಳ ನಿರ್ವಹಣೆ  ಇತ್ಯಾದಿ ವಿಷಯಗಳ ಕುರಿತು ಕಾಲ್ನಡಿಗೆಯಲ್ಲಿ ಸಂಚರಿಸಿ ಪರಿಶೀಲಿಸಿದರು. ಈ ವೇಳೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯ ನಗರ ಸೇವಕರು, ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.


 ನಂತರ ಬಡಾವಣೆಯ ಶಿವಾಲಯದಲ್ಲಿ ಬಡಾವಣೆಯ ಎಲ್ಲ ರಹವಾಸಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ಬಡಾವಣೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ತಾವು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಸಚಿವರು, ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಬಡಾವಣೆಯಲ್ಲಿ ಮಾಡಿರುವುದಾಗಿ ತಿಳಿಸಿದರು.

 ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಯ ಸಂಘದ ಅಧ್ಯಕ್ಷರಾದ ವ್ಹಿ.ಜಿ ನೀರಲಗಿಮಠ ಪ್ರಾಸ್ತಾವಿಕ ಮಾತನಾಡಿ, ಬಡಾವಣೆಯ ಅಭಿವೃದ್ಧಿ ಕುರಿತು ಹಾಗೂ ಬಡಾವಣೆಗೆ ಸಚಿವರ ಅಪಾರವಾದ ಕೊಡುಗೆ, ಕಾಳಜಿಯ ಬಗ್ಗೆ ವಿವರಣೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ನಮ್ಮ ಯಾವುದೇ ಬೇಡಿಕೆ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಾರೆ. ಅವರಿಂದಾಗಿ ಬಡಾವಣೆಯ ಜನರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದರು.

 ಸಿ ಬಿ ಸಂಗೊಳ್ಳಿ  ಸ್ವಾಗತಿಸಿದರು. ಎಸ್ ಸಿ ಗಂಗಾಪುರ ವಂದನಾರ್ಪಣೆ ಮಾಡಿದರು. ಮಹಾನಗರ ಪಾಲಿಕೆ ಅಧಿಕಾರಿ ಕಲಾದಗಿ, ನಗರ ಸೇವಕ ಸಂದೀಪ ಜೀರಗಾಳ, ಅರವಿಂದ ಜೋಶಿ, ಯೋಗೇಶ ತಳವಾರ, ಮಲ್ಲಿಕಾರ್ಜುನ ರೊಟ್ಟಿ, ಪಟ್ಟಣಶೆಟ್ಟಿ, ಬಿ ಐ ಪಾಟೀಲ,  ರುದ್ರಣ್ಣಾ ಚಂದರಗಿ, ಸುಭಾಷ್ ಹುಲ್ಲಳ್ಳಿ,  ರಾಜು ಮಂಜರಿಗಿ,  ಬಡಿಗೇರ, ಕೃಷ್ಣ ಹಂದಿಗುಂದ, ಉಮೇಶ ಜೋಶಿ, ಫಟಕಾಳ,

ಹೇಮಾ ಶೆಟ್ಟಿ, ಗುಗ್ಗರಿ, ಶಾಂತಾ ಕಬ್ಬಲಿಗೇರ, ಶೋಭಕ್ಕ ಹೊಸಮಠ ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ