Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಪಿ ಪ್ರಜ್ವಲ್ ನ್ನು ರಕ್ಷಿಸುವುದು ಯಾವ ನ್ಯಾಯ? ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿ

ಬೆಂಗಳೂರು29: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.




ಪ್ರಜ್ವಲ್ ರೇವಣ್ಣ ಅವರ ಹಿಂದಿನ ಮನೆಯ ಸಹಾಯಕರು ನೀಡಿದ ದೂರಿನ ಮೇರೆಗೆ ಭಾನುವಾರ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಲಾಗಿದೆ. ಎಎನ್‌ಐ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, 'ಅವರು (ಬಿಜೆಪಿ) ಪ್ರಜ್ವಲ್ ರೇವಣ್ಣ ದೇಶದಿಂದ ಫಲಾಯನ ಮಾಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಇಂದು, ವದಂತಿಗಳು ಹರಿದಾಡುತ್ತಿರುವಂತೆ ಅವರು ದೇಶವನ್ನು ತೊರೆದಿದ್ದರೆ, ಅವರು ಹೇಗೆ ದೇಶವನ್ನು ತೊರೆದರು? ಅದಕ್ಕೆ ಸಹಕರಿಸಿದವರು ಯಾರು? ಈ ನಿಟ್ಟಿನಲ್ಲಿ ಬಿಜೆಪಿಯನ್ನು ನಾನು ನೇರವಾಗಿ ದೂಷಿಸುತ್ತೇನೆ ಎಂದರು.




ಲೋಕಸಭೆ ಚುನಾವಣೆಯಲ್ಲಿ ರೇವಣ್ಣ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಿದ್ದಕ್ಕಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಈ ಬಗ್ಗೆ ಅವರ ಮೌನವನ್ನು ಪ್ರಶ್ನಿಸಿದರು.








'ಪ್ರಜ್ವಲ್ ರೇವಣ್ಣ ಅವರಿಂದ ಸಾವಿರಾರು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂಬ ಮಾಹಿತಿ ಇದೆ. ಅವರೆಲ್ಲ ಹಿಂದೂ ಮಹಿಳೆಯರೇ ಆಗಿದ್ದು, ಅವರಿಗೆ ನ್ಯಾಯ ಕೊಡಿಸಬೇಕು ಎಂದು ಬಿಜೆಪಿಯವರಿಗೆ ಅನಿಸುತ್ತಿಲ್ಲವೇ. ಜನವರಿಯಲ್ಲಿಯೇ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಗ್ಗೆ ತಿಳಿಸಿದ್ದರು. ಆದರೂ, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಡಲು ಮೋದಿ ಒಪ್ಪಿಕೊಂಡಿದ್ದು ಹೇಗೆ' ಎಂದು ಪ್ರಶ್ನಿಸಿದರು.




ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದಲ್ಲಿ ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು ಹಾಸನ ಘಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಕುಳಿತಿರುವುದು ಏಕೆ? ಹುಬ್ಬಳ್ಳಿ ನೇಹಾ ಕೊಲೆ ಸಮಯದಲ್ಲಿ ಮಾಡಿದಂತೆ ಬಿಜೆಪಿ ಏಕೆ ಪ್ರತಿಭಟನೆ ಮಾಡುತ್ತಿಲ್ಲ? ಎಂದರು.








ಎಫ್ಐಆರ್ ದಾಖಲಿಸದ ಕೂಡಲೇ ನಮ್ಮ ಸರ್ಕಾರ ಎಸ್ಐಟಿ ರಚಿಸಿದ್ದು, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿಯವರು ಮೌನ ತಾಳಿರುವುದು ಬಹಳ ಆತಂಕಕಾರಿಯಾಗಿದೆ ಎಂದು ಹೇಳಿದರು.

ಇಂದು ಮುಂಜಾನೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಪಕ್ಷದ ಅಧ್ಯಕ್ಷ ಎಚ್‌ಡಿ ದೇವೇಗೌಡರಿಗೆ ಪತ್ರ ಬರೆದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಒತ್ತಾಯಿಸಿದರು.

ಎಚ್‌ಡಿ ದೇವೇಗೌಡರ ಮೊಮ್ಮಗನ ಉಚ್ಚಾಟನೆಯಿಂದ ಪಕ್ಷಕ್ಕಾಗುವ ಮತ್ತಷ್ಟು ಮುಜುಗರದಿಂದ ಪಾರು ಮಾಡಬಹುದು ಎಂದು ಕಂದಕೂರ್ ಹೇಳಿದರು.














 



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ