Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರ  ರಕ್ಷಣೆ



ವಿಜಯನಗರ (ಹೊಸಪೇಟೆ) ಮೇ.14:   ಜಿಲ್ಲೆಯ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಎಂಬಲ್ಲಿ ಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸ್ಪಂದನ ಎಂಬ ಎನ್‌ಜಿಓ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ  ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಹಾಯಕ ಆಯುಕ್ತರು ನಂದಿಬಂಡಿ ಗ್ರಾಮದ ಮೇಲೆ ದಾಳಿ ನಡೆಸಿದರು.
ದಾಳಿಯ ವೇಳೆ ಕಾರ್ಮಿಕರು  ನಾಲ್ಕು ಅಡಿ ಅಗಲದ ಪುಟ್ಟ ಮನೆಗಳಲ್ಲಿ  ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ದಯನೀಯ ಸ್ಥಿತಿಯಲ್ಲಿ ಬದುಕುತ್ತಿದ್ದ  10 ಮಕ್ಕಳು, 11 ಮಹಿಳೆಯರು,  16 ಪುರುಷರು ಸೇರಿದಂತೆ ಒಟ್ಟು 37 ಮಂದಿ ಕಾರ್ಮಿಕರು ಇದ್ದು, ಎಲ್ಲರೂ ಒಡಿಶಾದ ಬಲಂಗೀರ್ ಮತ್ತು ನವರಂಗ್‌ಪುರ ಜಿಲ್ಲೆಯವರಾಗಿದ್ದಾರೆ.

 ಈ ಕಾರ್ಮಿಕರನ್ನು ಒಡಿಶಾದಿಂದ ಕರೆತರಲಾಗಿದ್ದು, ಆರು ತಿಂಗಳ ಹಿಂದೆ ಪ್ರತಿ ವ್ಯಕ್ತಿಗೆ 40,000 ರೂಪಾಯಿ ಮುಂಗಡ ಹಣ ನೀಡಿ ಇಲ್ಲಿಗೆ ಕರೆತರಲಾಗಿತ್ತು.  ಆರಂಭದಲ್ಲಿ ಆರು ತಿಂಗಳ ಅವಧಿಗೆ ಅಷ್ಟೇ ಕೆಲಸ ಮಾಡಿಸುವುದಾಗಿ ಹೇಳಿ ಕರೆತರಲಾಗಿತ್ತು. ಹಾಗೆಯೇ ಕೆಲಸದ ಆಧಾರದ ಮೇಲೆ ಹಣ ನೀಡುತ್ತೇವೆ ಎಂಬ ಭರವಸೆಯೂ ನೀಡಲಾಗಿತ್ತು.  ಅದರಂತೆ ಹಣದ ಆಸೆಗೆ ವಾರವಿಡೀ ಮೈ ಮುರಿದು  ಕೆಲಸ ಮಾಡಿದರೂ ಸಹ, ಇಡೀ ಕುಟುಂಬಕ್ಕೆ ವಾರಕ್ಕೆ ಕೇವಲ 500 ರೂಪಾಯಿ ಮಾತ್ರ ನೀಡುತ್ತಾರೆ. ಆದರಿಂದ ನಾವು ಆರು ತಿಂಗಳ ಹಿಂದೆ ಬಂದಿದ್ದೆವು. ನಮ್ಮ ಅವಧಿ ಮುಗಿದಿದೆ ನಾವು ಹೋಗುತ್ತೇವೆ ಎಂದು ಹೇಳಿದಾಗ ನೀವು ತಲಾ 40,000 ರೂಪಾಯಿ ಪಡೆದು ಬಂದಿದ್ದೀರಿ, ಹೋಗುವಂತಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು. ಹೊರ ಪ್ರಪಂಚದ ಸಂಪರ್ಕವಿಲ್ಲದಂತೆ  ಕಾಯಲು ಸೆಕ್ಯೂರಿಟಿ ಗಾರ್ಡ್  ನೇಮಿಸಲಾಗಿತ್ತು ಎಂದು ಸಂತ್ರಸ್ತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

 ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಪ್ರತಿಕ್ರಿಯಿಸಿ, ಇದು ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಜೀತ ಪದ್ಧತಿಯಂತಹ ಅನಿಷ್ಟ ಪದ್ಧತಿಯನ್ನು ಬೆಂಬಲಿಸುವವರ ವಿರುದ್ಧ ಈಗಾಗಲೇ ಮರಿಯಮ್ಮನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಿಸಲಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು .

 ನಿಟ್ಟುಸಿರು ಬಿಟ್ಟ ಕಾರ್ಮಿಕರು :
ಒತ್ತೆಯಾಳುಗಳಾಗಿದ್ದ ಒಡಿಶಾ ಮೂಲದ 37 ಜೀವಗಳಿಗೆ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ.  ಜಿಲ್ಲಾಡಳಿತದ ಮಿಂಚಿನ ಕಾರ್ಯಾಚರಣೆಯಿಂದಾಗಿ ಜೀತ ಪದ್ಧತಿಯ ಸಂಕೋಲೆಯಲ್ಲಿ ನಲುಗುತ್ತಿದ್ದ 37 ಕಾರ್ಮಿಕರು ಇಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
 ಸಹಾಯಕ ಆಯುಕ್ತ ವಿವೇಕಾನಂದ ಅವರ ನೇತೃತ್ವದ ತಂಡವು ನಂದಿಬಂಡಿ ಗ್ರಾಮದ ಮೇಲೆ ದಾಳಿ ನಡೆಸಿ, ಜೀತ ಪದ್ಧತಿಯಲ್ಲಿ ಸಿಲುಕಿದ್ದ  37 ಕಾರ್ಮಿಕರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಸುದೀರ್ಘ ಕಾಲದ ನಂತರ ದಬ್ಬಾಳಿಕೆಯಿಂದ ಮುಕ್ತರಾದ ಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿತ್ತು. ಪಂಜರದಿಂದ ಬಿಡುಗಡೆಯಾದ ಹಕ್ಕಿಗಳಂತೆ ಎಲ್ಲರ ಮೊಗದಲ್ಲಿ ಸ್ವತಂತ್ರದ ಸಂಭ್ರಮ ಮನೆ ಮಾಡಿತ್ತು.
 ಜಿಲ್ಲಾಡಳಿತ ಕೇವಲ ರಕ್ಷಣೆಗೆ ಸೀಮಿತವಾಗದೇ, ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಸ್ವಗ್ರಾಮಕ್ಕೆ ಕಳುಹಿಸುವಲ್ಲಿ ವಿಶೇಷ ಕಾಳಜಿ ವಹಿಸಿತು. ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ  ಖುದ್ದಾಗಿ ಹಾಜರಿದ್ದು, ರೈಲಿನ ಮೂಲಕ ಅವರ ಸ್ವ ಗ್ರಾಮಕ್ಕೆ ಕಳುಹಿಸಿಕೊಡುವ ವ್ಯವಸ್ಥೆ  ಮಾಡಿದರು. ಅದಷ್ಟೇ ಅಲ್ಲದೇ ಕಾರ್ಮಿಕರೊಂದಿಗೆ ಇಬ್ಬರು ಪೋಲೀಸ್  ಮತ್ತು ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಹ ರಕ್ಷಣೆಗಾಗಿ ಕಳುಹಿಸಿಕೊಡಲಾಗಿದೆ.
ಈ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್ಪಿ ಪಿ.ಮುರಳೀಧರ, ಉಪವಿಭಾಗಾಧಿಕಾರಿ ವಿವೇಕಾನಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

******
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ